ಕ್ರಿಕೆಟ್ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾದ ಕುಂದಾಪುರ ಟ್ರೋಫಿ

ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾದ ಕುಂದಾಪುರ ಟ್ರೋಫಿ

-

- Advertisment -spot_img

ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾದ ಕುಂದಾಪುರ ಟ್ರೋಫಿ.

ಸ್ಪೋರ್ಟ್ಸ್ ಕನ್ನಡ ವರದಿ

ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಕುಂದಾಪುರ ಟ್ರೋಫಿ ಜಾತಿ ಧರ್ಮ ಭೇದವಿಲ್ಲದೇ,ರಾಜಕೀಯದ ನೆರಳಿಲ್ಲದೆ,ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾಗಿ ಸಮಸ್ತ ಕ್ರೀಡಾಪ್ರೇಮಿಗಳ ಹೃದಯ ಗೆದ್ದು ಸುದ್ದಿಯಾಗಿದೆ.

ಕುಂದಾಪುರದ ಉತ್ಸಾಹಿ ಯುವಕರಾದ ನ್ಯೂ ಸೆಲ್ ಡಾಟ್ ಕಾಮ್ ನ ಅಲ್ತಾಫ್ ಕೋಡಿ,ಯುವ ವೀಕ್ಷಕ ವಿವರಣೆಗಾರ ಶರತ್ ಕುಂಭಾಶಿ ಮತ್ತು ಅಂಪಾಯರ್ ಪ್ರಶಾಂತ್ ಪ್ರಭು ಮತ್ತು ಸ್ನೇಹಿತರ ಒಗ್ಗೂಡುವಿಕೆಯಲ್ಲಿ ನಡೆದ ಕುಂದಾಪುರ ಟ್ರೋಫಿಯ ಸಮಾರೋಪ ಸಮಾರಂಭದಲ್ಲಿ ವಿಶೇಷ ಚೇತನರಿಗಾಗಿ 5 ವ್ಹೀಲ್ ಚೇರ್,25 ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ,ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತ್ತೀಚೆಗಷ್ಟೇ ಕೋಟೇಶ್ವರದಲ್ಲಿ ನಡೆದ ಅಪಘಾತದಲ್ಲಿ ದುರ್ಮರಣಕ್ಕೀಡಾದ ಧನುಷ್ ಕಿರಿಮಂಜೇಶ್ವರ ಇವರ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಲಾಯಿತು.

ಒಟ್ಟು 16 ಫ್ರಾಂಚೈಸಿಗಳು ಐಪಿಎಲ್ ಮಾದರಿಯಲ್ಲಿ ಸೆಣಸಾಟ ನಡೆಸಿದ ಈ ಪಂದ್ಯಾಟದಲ್ಲಿ ಪ್ರತಿಯೊಂದು ತಂಡದಲ್ಲಿ ರಾಜ್ಯಮಟ್ಟದ 2 ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಿದ್ದರಿಂದ ಕರಾವಳಿ ಪರಿಸರದ ಸುಮಾರು 180 ಯುವ ಆಟಗಾರರಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಸಿಕ್ಕಿತ್ತು.

ಸಚಿನ್ ಇಲೆವೆನ್ ಪ್ರಥಮ

ಲೀಗ್ ಹಂತದ ರೋಚಕ ಸೆಣಸಾಟದ ಬಳಿಕ ಅಂತಿಮವಾಗಿ ಸಚಿನ್ ಇಲೆವೆನ್ ತಂಡದ ಸಾಗರ್ ಭಂಡಾರಿ ಮತ್ತು ಶಶಾಂಕ್ ಅತ್ಯಮೋಘ ಆಟದ ಫಲವಾಗಿ ಸಂಗಮ್ ತೆಂಕನಿಡಿಯೂರು ತಂಡವನ್ನು ಮಣಿಸಿ ಪ್ರಥಮ ಬಹುಮಾನದ ಸಹಿತ ಒಂದು ಲಕ್ಷ ನಗದು ಬಹುಮಾನ ಹಾಗೂ ದ್ವಿತೀಯ ಸ್ಥಾನಿ ಸಂಗಮ್ ತೆಂಕನಿಡಿಯೂರು 50000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.

ಫೈನಲ್ ಪಂದ್ಯಶ್ರೇಷ್ಟ ಮತ್ತು ಬೆಸ್ಟ್ ಬ್ಯಾಟರ್ ಶಶಾಂಕ್ ಶೆಟ್ಟಿ, ಬೆಸ್ಟ್ ಬೌಲರ್ ರೀತು ಮೈಸೂರು,ಬೆಸ್ಟ್ ಕೀಪರ್ ಪ್ರಶಸ್ತಿ ಹರಿ ಬೆಂಗಳೂರು ಪಡೆದರೆ ಸರಣಿಯುದ್ದಕ್ಕೂ ಶ್ರೇಷ್ಠ ಆಲ್ರೌಂಡರ್ ಪ್ರದರ್ಶನ ನೀಡಿದ ಸಾಗರ್ ಭಂಡಾರಿ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಚಿನ್ನದ ಉಂಗುರ ತನ್ನದಾಗಿಸಿಕೊಂಡರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two + ten =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you