ಕ್ರಿಕೆಟ್ಕರಾವಳಿಗೆ ಕೀರ್ತಿ ತಂದ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ

ಕರಾವಳಿಗೆ ಕೀರ್ತಿ ತಂದ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ

-

- Advertisment -spot_img

ಕರಾವಳಿಗೆ ಕೀರ್ತಿ ತಂದ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ

ಕರ್ನಾಟಕ ತಂಡ ಐದು ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿ ಗೆಲ್ಲಲು ತಂಡದ ಸಂಘಟಿತ ಪ್ರದರ್ಶನವೇ ಕಾರಣ. ಬ್ಯಾಟಿಂಗ್’ನಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ ನಾಯಕ ಮಯಾಂಕ್ ಅಗರ್ವಾಲ್, ಸ್ಮರಣ್ ಆರ್, ದೇವದತ್ತ್ ಪಡಿಕ್ಕಲ್, ಅನೀಶ್ ಕೆ.ವಿ, ಅಭಿನವ್ ಮನೋಹರ್, ಕೆ.ಎಲ್ ಶ್ರೀಜಿತ್ ಅಮೋಘ ಪ್ರದರ್ಶನ ತೋರಿದರೆ, ಬೌಲಿಂಗ್’ನಲ್ಲಿ ವೇಗಿ ಕೌಶಿಕ್, ಪ್ರಸಿದ್ಧ್ ಕೃಷ್ಣ, ಉಪನಾಯಕ ಶ್ರೇಯಸ್ ಗೋಪಾಲ್ ಜೊತೆಗೆ ಮಿಂಚಿದ್ದಉಡುಪಿ ಜಿಲ್ಲೆಯ ಕೋಟಾದ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ. ಎಡಗೈ ವೇಗದ ಬೌಲರ್ ಆಗಿರುವ ಅಭಿಲಾಷ್ ಶೆಟ್ಟಿ ಒಂದು ಬಾರಿ ಐದು ವಿಕೆಟ್ ಸಹಿತ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ 7 ಪಂದ್ಯಗಳಿಂದ 17 ವಿಕೆಟ್ ಪಡೆದು ಕರ್ನಾಟಕದ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ವಿದರ್ಭ ವಿರುದ್ಧದ ಫೈನಲ್’ನಲ್ಲಿ ಮೂರು ವಿಕೆಟ್ ಪಡೆಯುವ ಮೂಲಕ ಕರ್ನಾಟಕ ತಂಡ ಚಾಂಪಿಯನ್ ಪಟ್ಟಕ್ಕೇರಲು ಕಾರಣರಾಗಿದ್ದರು. ಅಭಿಲಾಷ್ ಶೆಟ್ಟಿ ಈ ವರ್ಷ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ನವೆಂಬರ್ 6ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಂಗಾಳ ವಿರುದ್ಧದ ಪಂದ್ಯದ ಮೂಲಕ ರಣಜಿ ಕ್ರಿಕೆಟ್’ಗೆ ಅಭಿಲಾಷ್ ಶೆಟ್ಟಿ ಕಾಲಿಟ್ಟಿದ್ದರು.

ಎಡಗೈ ಸ್ವಿಂಗ್ ಬೌಲರ್ ಆಗಿರುವ ಅಭಿಲಾಷ್ ಶೆಟ್ಟಿ ಹೊಸ ಚೆಂಡಿನಲ್ಲಿ ಅತ್ಯಂತ ಪರಿಣಾಮಕಾರಿ ಬೌಲರ್ ಎಂದೇ ಹೆಸರು ಮಾಡಿದ್ದಾರೆ. ಚೆಂಡನ್ನು ಎರಡೂ ಕಡೆ ಸ್ವಿಂಗ್ ಮಾಡುವ ಸಾಮರ್ಥ್ಯವುಳ್ಳ ಅಭಿಲಾಷ್ ಶೆಟ್ಟಿ, ಈಗಾಗ್ಲೇ ಕೆ.ಎಸ್.ಸಿ.ಎ ಲೀಗ್ ಪಂದ್ಯಗಳು, ಡಾ.ತಿಮ್ಮಪ್ಪಯ್ಯ ಟ್ರೋಫಿ ಟೂರ್ನಿ, ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದರು.

25 ವರ್ಷದ ಅಭಿಲಾಷ್ ಶೆಟ್ಟಿ 2023ರ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ 11 ಪಂದ್ಯಗಳಿಂದ 22 ವಿಕೆಟ್ ಪಡೆದು ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಈ ವರ್ಷದ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಮಂಗಳೂರು ಡ್ರಾಗನ್ಸ್ ಪರ 10 ಪಂದ್ಯಗಳಿಂದ 11 ವಿಕೆಟ್ ಪಡೆದು ಮಿಂಚಿದ್ದರು.

ಅಭಿಲಾಷ್ ಶೆಟ್ಟಿಗೆ ಕರ್ನಾಟಕ ಮಾಜಿ ವೇಗದ ಬೌಲರ್, ಪೀಣ್ಯ ಎಕ್ಸ್’ಪ್ರೆಸ್ ಖ್ಯಾತಿಯ ಅಭಿಮನ್ಯು ಮಿಥುನ್ ಬೌಲಿಂಗ್ ಗುರು. ಬೆಂಗಳೂರಿಗೆ ಬಂದ ನಂತರ ಮಿಥುನ್ ಅವರ ಗರಡಿಯಲ್ಲಿ ಅಭಿಲಾಷ್ ಶೆಟ್ಟಿ ಪಳಗುತ್ತಿದ್ದಾರೆ.

LEAVE A REPLY

Please enter your comment!
Please enter your name here

ten + fourteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you