ಕ್ರಿಕೆಟ್ಪಂಜಾಬ್ ವಿರುದ್ಧ ಭರ್ಜರಿ ದ್ವಿಶತಕ ಬಾರಿಸಿದ ಸ್ಮರಣ್ ರವಿಚಂದ್ರನ್

ಪಂಜಾಬ್ ವಿರುದ್ಧ ಭರ್ಜರಿ ದ್ವಿಶತಕ ಬಾರಿಸಿದ ಸ್ಮರಣ್ ರವಿಚಂದ್ರನ್

-

- Advertisment -spot_img

ಪಂಜಾಬ್ ವಿರುದ್ಧ ಭರ್ಜರಿ ದ್ವಿಶತಕ ಬಾರಿಸಿದ ಸ್ಮರಣ್ ರವಿಚಂದ್ರನ್

ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಕರ್ನಾಟಕ ತಂಡ ಚಾಂಪಿಯನ್ ಪಟ್ಟಕ್ಕೇರಲು ಕಾರಣವಾಗಿದ್ದ ಎಡಗೈ ದಾಂಡಿಗ ಸ್ಮರಣ್ ರವಿಚಂದ್ರನ್ ರಣಜಿ ಟ್ರೋಫಿಯಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂಜಾಬ್ ವಿರುದ್ಧದ ಪಂದ್ಯದ 2ನೇ ದಿನ ಸ್ಮರಣ್ ರವಿಚಂದ್ರನ್ ರಣಜಿ ವೃತ್ತಿಜೀವನದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿದರು. 4ನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದ ಸ್ಮರಣ್ 277 ಎಸೆತಗಳನ್ನೆದುರಿಸಿ 25 ಬೌಂಡರಿ ಹಾಗೂ 3 ಸಿಕ್ಸರ್’ಗಳ ನೆರವಿನಿಂದ 203 ರನ್ ಗಳಿಸಿ ಔಟಾದರು.

ವಡೋದರದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಸ್ಮರಣ್ ರವಿಚಂದ್ರನ್ 101 ರನ್ ಸಿಡಿಸಿ ಕರ್ನಾಟಕದ ಗೆಲುವಿಗೆ ಕಾರಣರಾಗಿದ್ದರು. ತಮ್ಮ ಭರ್ಜರಿ ಫಾರ್ಮನ್ನು ರಣಜಿ ಟ್ರೋಫಿಗೂ ಮುಂದುವರಿಸಿದ ಸ್ಮರಣ್ ಚೊಚ್ಚಲ ರಣಜಿ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿ ತವರು ನೆಲದಲ್ಲಿ ಮಿಂಚಿದ್ದಾರೆ.

ಸ್ಮರಣ್ ಅವರ ದ್ವಿಶತಕದ ನೆರವಿನಿಂದ ಕರ್ನಾಟಕ ತಂಡ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ 475 ರನ್ ಗಳಿಸಿ ಆಲೌಟಾಯಿತು. ಈ ಮೂಲಕ ಮಯಾಂಕ್ ಅಗರ್ವಾಲ್ ಬಳಗ 420 ರನ್’ಗಳ ಭಾರೀ ಇನ್ನಿಂಗ್ಸ್ ಮುನ್ನಡೆ ಸಂಪಾದಿಸಿತು. ಶುಭಮನ್ ಗಿಲ್ ನಾಯಕತ್ವದ ಪಂಜಾಬ್ ತಂಡ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ ಕೇವಲ 55 ರನ್’ಗಳಿಗೆ ಆಲೌಟಾಗಿತ್ತು.

420 ರನ್’ಗಳ ದೊಡ್ಡ ಹಿನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್ ತಂಡ, 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿದೆ.

LEAVE A REPLY

Please enter your comment!
Please enter your name here

11 + nineteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you