ಕ್ರಿಕೆಟ್ಭಾರತ ಜ್ಯೂನಿಯರ್ ತಂಡಕ್ಕೆ ಆಯುಷ್-ಸೂರ್ಯವಂಶಿ ಓಪನರ್ಸ್

ಭಾರತ ಜ್ಯೂನಿಯರ್ ತಂಡಕ್ಕೆ ಆಯುಷ್-ಸೂರ್ಯವಂಶಿ ಓಪನರ್ಸ್

-

- Advertisment -spot_img

ಭಾರತ ಜ್ಯೂನಿಯರ್ ತಂಡಕ್ಕೆ ಆಯುಷ್-ಸೂರ್ಯವಂಶಿ ಓಪನರ್ಸ್

ಐಪಿಎಲ್’ನಲ್ಲಿ ಅಮೋಘ ಆಟದ ಮೂಲಕ ಗಮನ ಸೆಳೆದಿರುವ ಯುವ ತಾರೆಗಳಾದ ಆಯುಷ್ ಮಹಾತ್ರೆ ಮತ್ತು ವೈಭವ್ ಸೂರ್ಯವಂಶಿ ಭಾರತ ಅಂಡರ್-19 ತಂಡದ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕನ್ನಡಿಗ ತಿಲಕ್ ನಾಯ್ಡು ಮುಂದಾಳತ್ವದ ಬಿಸಿಸಿಐ ಕಿರಿಯರ ಆಯ್ಕೆ ಸಮಿತಿ ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಅಂಡರ್-19 ತಂಡವನ್ನು ಪ್ರಕಟಿಸಿದ್ದು, ಮುಂಬೈನ ಆಯುಷ್ ಮಹಾತ್ರೆ ನಾಯಕನಾಗಿ ನೇಮಕಗೊಂಡಿದ್ದಾರೆ. ಬಿಹಾರದ 14 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಕೂಡ ಭಾರತ ಕಿರಿಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಐಪಿಎಲ್-18 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಮಿಂಚಿರುವ ಆಯುಷ್ ಮಹಾತ್ರೆ ಆಡಿರುವ 6 ಪಂದ್ಯಗಳಿಂದ 110 ಎಸೆತಗಳಲ್ಲಿ 187.27ರ ಸ್ಟ್ರೈಕ್’ರೇಟ್’ನಲ್ಲಿ 110 ರನ್ ಕಲೆ ಹಾಕಿದ್ದಾರೆ.

ಇನ್ನು ರಾಜಸ್ಥಾನ್ ರಾಯಲ್ಸ್ ಪರ 35 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದ ವೈಭವ್ ಸೂರ್ಯವಂಶಿ ಐಪಿಎಲ್-18ರಲ್ಲಿ 7 ಪಂದ್ಯಗಳನ್ನಾಡಿದ್ದು, 122 ಎಸೆತಗಳಲ್ಲಿ 206.55ರ ಅದ್ಭುತ ಬ್ಯಾಟಿಂಗ್ ಸ್ಟ್ರೈಕ್’ರೇಟ್’ನಲ್ಲಿ 252 ರನ್ ಕಲೆ ಹಾಕಿದ್ದಾರೆ.

ಇದೀಗ ಮುಂಬೈ-ಬಿಹಾರದ ಈ ಬಲಗೈ-ಎಡಗೈ ಜೋಡಿ ಭಾರತ ಜ್ಯೂನಿಯರ್ ತಂಡದ ಪರ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದೆ. ಇಂಗ್ಲೆಂಡ್’ನಲ್ಲಿ ಭಾರತ ಜ್ಯೂನಿಯರ್ ತಂಡ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ದ್ವಿದಿನ ಪಂದ್ಯಗಳ ಸರಣಿಯನ್ನಾಡಲಿದೆ.

ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತ ಅಂಡರ್-19 ತಂಡ ಹೀಗಿದೆ.

ಆಯುಷ್ ಮಹಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರ, ಮೌಲ್ಯರಾಜಸಿಂಹ ಚಾವ್ಡ, ರಾಹುಲ್ ಕುಮಾರ್, ಅಭಿಜ್ಞಾನ್ ಕುಂಡು (ಉಪನಾಯಕ & ವಿಕೆಟ್ ಕೀಪರ್), ಹರ್ವಂಶ್ ಸಿಂಗ್ (ವಿಕೆಟ್ ಕೀಪರ್), ಆರ್.ಎಸ್ ಅಂಬರೀಶ್, ಕನಿಷ್ಟ್ ಚೌಹಾಣ್, ಖಿಲಾನ್ ಪಟೇಲ್, ಹೆನಿಲ್ ಪಟೇಲ್, ಯುಧಜಿತ್ ಗುಹಾ, ಪ್ರಣವ್ ರಾಘವೇಂದ್ರ, ಮೊಹಮ್ಮದ್ ಅನಾನ್, ಆದಿತ್ಯ ರಾಣಾ, ಅನ್ಮೋಲ್’ಜೀತ್ ಸಿಂಗ್.

Standby Players: ನಮನ್ ಪುಷ್ಪಕ್, ವೇದಾಂತ್ ತ್ರಿವೇದಿ, ವಿಕಲ್ಪ್ ತಿವಾರಿ, ಅಲಂಕ್ರಿತ್ ರಪೋಲ್ (ವಿಕೆಟ್ ಕೀಪರ್)

LEAVE A REPLY

Please enter your comment!
Please enter your name here

seven + 17 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you