ಕ್ರಿಕೆಟ್ದುಬೈನಲ್ಲಿ 'ಮಿಸ್ಟರ್ ಕ್ರಿಕೆಟ್ ರಾಹುಲ್ ದ್ರಾವಿಡ್ ಕಪ್' - ಸೀಸನ್ 1...

ದುಬೈನಲ್ಲಿ ‘ಮಿಸ್ಟರ್ ಕ್ರಿಕೆಟ್ ರಾಹುಲ್ ದ್ರಾವಿಡ್ ಕಪ್’ – ಸೀಸನ್ 1 ಆರಂಭ; ಟೆಕ್ನೋ ಟೈಟಾನ್ಸ್ ಗೆ  ಮೊದಲ ಪಂದ್ಯದಲ್ಲಿ ಶುಭಾರಂಭ

-

- Advertisment -spot_img

ದುಬೈನಲ್ಲಿ ‘ಮಿಸ್ಟರ್ ಕ್ರಿಕೆಟ್ ರಾಹುಲ್ ದ್ರಾವಿಡ್ ಕಪ್’ – ಸೀಸನ್ 1 ಆರಂಭ; ಟೆಕ್ನೋ ಟೈಟಾನ್ಸ್ ಗೆ  ಮೊದಲ ಪಂದ್ಯದಲ್ಲಿ ಶುಭಾರಂಭ

ಕ್ರಿಕೆಟ್ ಲೋಕದಲ್ಲಿ “ಗ್ರೇಟ್ ವಾಲ್ ಆಫ್ ಇಂಡಿಯಾ” ಎಂದೇ ಖ್ಯಾತರಾದ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿ ದುಬೈನಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಆಯೋಜನೆಗೊಂಡಿದೆ. ಈ ಟೂರ್ನಮೆಂಟನ್ನು ದುಬೈನಲ್ಲಿ ನೆಲೆಸಿರುವ ಕುಂದಾಪುರದ ಸೂರಾಲು ಮೂಲದ ಕ್ರಿಕೆಟ್ ಅಭಿಮಾನಿ ಹಾಗೂ ಟೆಕ್ನೋ ಟೈಟಾನ್ಸ್ ತಂಡದ ನಾಯಕ ವಿಠಲ ರಿಷಾನ್ ನಾಯಕ್ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ.

ಸೀಸನ್-1 ಕ್ರಿಕೆಟ್ ಟೂರ್ನಿಯು ನಿನ್ನೆ ಜೂನ್ 1ರಂದು ಪ್ರಾರಂಭವಾಗಿದ್ದು, ಜುಲೈ 20ರವರೆಗೆ ಪ್ರತಿ ಭಾನುವಾರ ನಡೆಯಲಿದೆ. ಪ್ರತಿಯೊಂದು ಪಂದ್ಯವೂ 15 ಓವರಿನ ಪಂದ್ಯವಾಗಿದ್ದು, ದುಬೈನ ವಿವಿಧ ಭಾಗಗಳಿಂದ ಆಯ್ಕೆಯಾದ 16 ಹೆಸರಾಂತ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಫೈನಲ್ ಪಂದ್ಯ ಜುಲೈ 20 ರಂದು ಅಜ್ಮಾನ್‌ನ ಗ್ರಾಸ್ ಗ್ರೌಂಡ್‌ನಲ್ಲಿ ನಡೆಯಲಿದೆ.

ಟೂರ್ನಿಯ ಮೊದಲ ಪಂದ್ಯ ನಿನ್ನೆ ಬ್ಲೂ ಮಾಸ್ಟರ್ಸ್ ಮತ್ತು ಟೆಕ್ನೋ ಟೈಟಾನ್ಸ್ ತಂಡಗಳ ಮಧ್ಯೆ ನಡೆಯಿತು. ಮೊದಲು ಬ್ಯಾಟ್ ಮಾಡಿದ ಬ್ಲೂ ಮಾಸ್ಟರ್ ತಂಡ ನಿಗದಿತ 15 ಓವರ್ ಗಳಲ್ಲಿ 105 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೆಕ್ನೋ ಟೈಟಾನ್ಸ್ 10.3 ಓವರ್ ಗಳಲ್ಲಿ ಗುರಿಯನ್ನು ತಲುಪಿ ಆರು ವಿಕೆಟ್ ಗಳಿಂದ ಪಂದ್ಯವನ್ನು ಜಯಿಸಿತು. ಉತ್ತಮವಾಗಿ ಬೌಲಿಂಗ್ ಮಾಡಿದ ಟೆಕ್ನೋ ಟೈಟಾನ್ಸ್ ತಂಡದ ಆಟಗಾರ ನದೀರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗಳಿಸಿದರು

ಕೇರಳ, ಬಿಹಾರ್, ಮುಂಬೈ, ಕೊಲ್ಕತ್ತಾ, ತಮಿಳುನಾಡು, ರಾಜಸ್ಥಾನ ಹಾಗೂ ಕರ್ನಾಟಕದ ಉಡುಪಿ, ಮಂಗಳೂರು, ಕುಂದಾಪುರದ ಪ್ರತಿಭಾವಂತ ಆಟಗಾರರು ಪಾಲ್ಗೊಳ್ಳುತ್ತಿರುವ ಈ ಪಂದ್ಯಾವಳಿ ಯುಎಇಯಲ್ಲಿರುವ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಆಸಕ್ತಿ ಹುಟ್ಟಿಸಿದೆ.

LEAVE A REPLY

Please enter your comment!
Please enter your name here

three × 1 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you