ಬ್ಯಾಡ್ಮಿಂಟನ್ಅಕ್ಟೋಬರ್ 11 ರಂದು ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಗೆ ಸಾಕ್ಷಿಯಾಗಲಿದೆ...

ಅಕ್ಟೋಬರ್ 11 ರಂದು ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಗೆ ಸಾಕ್ಷಿಯಾಗಲಿದೆ ಅಜ್ಜರಕಾಡು ಇಂಡೋರ್ ಸ್ಟೇಡಿಯಂ

-

- Advertisment -spot_img

 

 ಅಕ್ಟೋಬರ್ 11 ರಂದು ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಗೆ ಸಾಕ್ಷಿಯಾಗಲಿದೆ ಅಜ್ಜರಕಾಡು ಇಂಡೋರ್ ಸ್ಟೇಡಿಯಂ

ಕುಂದಾಪುರದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (Torpedoes Sports Club) ಆಯೋಜಿಸಿರುವ ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ (Torpedoes Badminton Premiere League) ಪಂದ್ಯಾವಳಿಗೆ ಸಜ್ಜಾಗುತ್ತಿದೆ. ಅಜ್ಜರಕಾಡು ಇಂಡೋರ್ ಸ್ಟೇಡಿಯಂ ಅಕ್ಟೋಬರ್ 11ರಂದು ಈ ಪ್ರತಿಷ್ಠಿತ ಟೂರ್ನಮೆಂಟ್‌ಗೆ ಆತಿಥ್ಯ ವಹಿಸಲಿದೆ.

ಈ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಪ್ರತಿಯೊಂದು ತಂಡವೂ ತಮ್ಮ ಸದಸ್ಯರ ಪಟ್ಟಿ ಹಾಗೂ ಸಂಯೋಜನೆ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.

ಭಾಗವಹಿಸುವ 12 ಫ್ರಾಂಚೈಸಿಗಳು:  ರ‌್ಯಾಕೆಟ್ ರೇಂಜರ್ಸ್, 
ಬಿಗ್ ಬೀಟರ್ಸ್ ಅಂಬಲಪಾಡಿ, ನ್ಯಾಷನಲ್ ಸ್ಮ್ಯಾಷರ್ಸ್ ತೀರ್ಥಹಳ್ಳಿ, ಮತ್ಸ್ಯರಾಜ್ ಗ್ರೂಪ್ ಮಲ್ಪೆ,  ಕೋಸ್ಟಲ್ ನೈಲ್, ಕೋಸ್ಟಲ್ ಸ್ಟಾರ್ಸ್ ಸುರತ್ಕಲ್, ಮಾಲ್ಸಿ ಸ್ಟ್ರೈಕರ್ಸ್, ಡ್ಯಾರಿಂಗ್ ಜಾಗ್ವರ್ಸ್,  ಗ್ಯಾಲಕ್ಸಿ ಸ್ಪೋರ್ಟ್ಸ್,  ಮಟ್ಟು ಅಸೋಸಿಯೇಟ್ಸ್, ರಾಯ್ ರಾಕರ್ಸ್ ಮತ್ತು ಫೆದರ್ ಫೈಟರ್ಸ್

ಅಧಿಕೃತವಾಗಿ ಬಿಡುಗಡೆಗೊಂಡಿರುವ ಫೋಟೋಗಳಲ್ಲಿ ಪ್ರತಿ ಫ್ರಾಂಚೈಸಿಯ ಮಾಲೀಕರು ಮತ್ತು ಆಟಗಾರರ ಚಿತ್ರಗಳು ಕಾಣಿಸಿಕೊಳ್ಳುತ್ತವೆ. ಹೊಸ ಲೀಗ್‌ನ ಪ್ರಯುಕ್ತ ಎಲ್ಲ ತಂಡಗಳೂ ತೀವ್ರ ಅಭ್ಯಾಸದಲ್ಲಿ ತೊಡಗಿಕೊಂಡಿದ್ದು, ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗಿದೆ.

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಅವರ ನೇತೃತ್ವದಲ್ಲಿ ಈ ಪ್ರೀಮಿಯರ್ ಲೀಗ್ ಆಯೋಜನೆ ನಡೆಯುತ್ತಿದೆ.

ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್‌ನ ಪಂದ್ಯಗಳು ಸ್ಪೋರ್ಟ್ಸ್ ಕನ್ನಡ ಮೀಡಿಯಾ ಲೈವ್ (Sports Kannada Media Live) ಮುಖಾಂತರ ನೇರ ಪ್ರಸಾರವಾಗಲಿವೆ. ಈ ಮೂಲಕ ಕುಂದಾಪುರ ಹಾಗೂ ಸುತ್ತಮುತ್ತಲಿನ ಬ್ಯಾಡ್ಮಿಂಟನ್ ಪ್ರೇಮಿಗಳಿಗೆ ನೇರ ವೀಕ್ಷಣೆಯ ಸೌಲಭ್ಯ ಒದಗಲಿದೆ.

ಗೌತಮ್ ಶೆಟ್ಟಿ ಅವರು ಮಾತನಾಡುತ್ತಾ, “ನಮ್ಮ ಉದ್ದೇಶ ಸ್ಥಳೀಯ ಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯ ಬೆಳವಣಿಗೆಗೆ ವೇದಿಕೆ ಸೃಷ್ಟಿಸುವುದು ಹಾಗೂ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದು,” ಎಂದು ಹೇಳಿದರು.

ಟೊರ್ಪೆಡೋಸ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಈ ಬಾರಿ ಬ್ಯಾಡ್ಮಿಂಟನ್ ಕ್ರೀಡಾಭಿಮಾನಿಗಳಿಗೆ ಹೊಸ ಉತ್ಸಾಹ ಮತ್ತು ಚೈತನ್ಯ ತುಂಬುವ ನಿರೀಕ್ಷೆಯಿದೆ.

 

LEAVE A REPLY

Please enter your comment!
Please enter your name here

11 + 7 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you