
ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಸೋಮಶೇಖರ್ ಪಡುಕರೆ ಆಯ್ಕೆ

2025 ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಖ್ಯಾತ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಆಯ್ಕೆ
ಬೆಂಗಳೂರು-ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಸಾಧಕರಿಗೆ ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಖ್ಯಾತ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಆಯ್ಕೆಯಾಗಿದ್ದಾರೆ.



ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.



ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 31 ರಂದು ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯರವರು ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.




