ಕ್ರಿಕೆಟ್ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್...

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

-

- Advertisment -spot_img

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್ ಹಬ್ಬಕ್ಕೆ ವೇದಿಕೆ ಸಜ್ಜಾಗಿದೆ. ಸಾಲಿಗ್ರಾಮದ ವೃಷ್ಠಿ (Vrishti) ಸಂಸ್ಥೆಯ ವತಿಯಿಂದ “ವಿಶ್ವ ವೃಷ್ಠಿ ಟ್ರೋಫಿ – 2026” ಎಂಬ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಮಾರ್ಚ್ 14 ಮತ್ತು 15 ರಂದು ಸಾಲಿಗ್ರಾಮದಲ್ಲಿ ನಡೆಯಲಿದೆ. ಸಂಸ್ಥೆಯ 20ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ರಾಜ್ಯಮಟ್ಟದ ಹೊನಲು ಬೆಳಕಿನ ಪಂದ್ಯಾಕೂಟವಾಗಿರಲಿದೆ.

ಈ ಕ್ರಿಕೆಟ್ ಟೂರ್ನಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಾವಂತ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯ ಒಟ್ಟು ಬಹುಮಾನ ಮೊತ್ತ ಗಮನಸೆಳೆಯುವಂತಿದ್ದು, ಪ್ರಥಮ ಬಹುಮಾನ ₹1,33,333 ಹಾಗೂ ದ್ವಿತೀಯ ಬಹುಮಾನ ₹77,777 ಎಂದು ಘೋಷಿಸಲಾಗಿದೆ. ಇದರಿಂದ ಪಂದ್ಯಾವಳಿಯಲ್ಲಿ  ಪಾಲ್ಗೊಳ್ಳುವ ತಂಡಗಳಿಗೆ ಉತ್ಸಾಹ ಹೆಚ್ಚಾಗಿದೆ.

ಮಾರ್ಚ್ 14 ರಂದು ನಡೆಯುವ ಪಂದ್ಯಗಳು open to all ಆಗಿರಲಿದ್ದು, ಮಾರ್ಚ್ 15 ರಂದು ವಿಶ್ವಕರ್ಮ ಸಮಾಜ ಭಾಂಧವರಿಗಾಗಿ ನಡೆಯಲಿದೆ.ಫೈನಲ್ ಬಳಿಕ ವೃಷ್ಠಿ ಸಂಸ್ಥೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ವಿಶೇಷ ಅತಿಥಿಗಳ ಸಮ್ಮುಖದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದೆ.

ಪಂದ್ಯಾವಳಿಯಲ್ಲಿ ಭಾಗವಹಿಸುವ ಪ್ರತಿಯೊಂದು ತಂಡವು 5 ಓವರ್‌ಗಳ ಆಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕಾಗುತ್ತದೆ. ಸೆಮಿಫೈನಲ್ ಪಂದ್ಯದಲ್ಲಿ ಪರಾಜಿತ ತಂಡಗಳಿಗೆ ವಿಶೇಷ ಬಹುಮಾನವೂ ನೀಡಲಾಗುತ್ತದೆ.

ಈ ಟೂರ್ನಿಯ ನೇತೃತ್ವವನ್ನು ಶ್ರೀ ವಿಜಯೇಂದ್ರ ಆಚಾರ್ಯ ವಹಿಸಿಕೊಂಡಿದ್ದು, ಸ್ಥಳೀಯ ಕ್ರೀಡಾಭಿಮಾನಿಗಳು ಮತ್ತು ಯುವಕರಿಂದ ಈ ಪಂದ್ಯಾವಳಿಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಆಸಕ್ತ ತಂಡಗಳು ಹೆಚ್ಚಿನ ಮಾಹಿತಿಗಾಗಿ ಸಂಘಟಕರಾದ ಕೆ‌‌.ಎಮ್.ಗಣೇಶ್ ಆಚಾರ್ಯ ಕುಂಭಾಶಿ ( 9448912173), ಮನೋಜ್ (9964479993), ಅಶ್ವಿನ್ (8553621789), ಸುಬ್ರಹ್ಮಣ್ಯ (9108199121) ಮತ್ತು ವಿಜಯೇಂದ್ರ (8296550621) ಅವರನ್ನು ಸಂಪರ್ಕಿಸಬಹುದು ಎಂದು ಆಯೋಜಕರು ತಿಳಿಸಿದ್ದಾರೆ.

ಸಾಲಿಗ್ರಾಮದಲ್ಲಿ ನಡೆಯಲಿರುವ ಈ ಕ್ರಿಕೆಟ್ ಹಬ್ಬ ಕ್ರೀಡಾಪ್ರಿಯರಿಗೆ ಹೊಸ ಉತ್ಸಾಹ ತುಂಬುವುದರ ಜೊತೆಗೆ ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ. ಈ ಪಂದ್ಯಾವಳಿ ವಿಶ್ವಕರ್ಮ ಕ್ರಿಕೆಟ್ ಇತಿಹಾಸದಲ್ಲಿಯೂ ಒಂದು ಮಹತ್ವದ ಮೈಲಿಗಲ್ಲಾಗಲಿದೆ.

ಪಂದ್ಯಾವಳಿಯ ಎಲ್ಲಾ ಪಂದ್ಯಗಳನ್ನು ‘ಸ್ಪೋರ್ಟ್ಸ್ ಕನ್ನಡ’ ಚಾನೆಲ್ ಮೂಲಕ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.

 

LEAVE A REPLY

Please enter your comment!
Please enter your name here

one × three =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you