ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಸಮರ್ ಕ್ಯಾಂಪ್ 2026

ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಸಮರ್ ಕ್ಯಾಂಪ್ 2026

ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕ್ರಿಕೆಟ್ ಸಮರ್ ಕ್ಯಾಂಪ್ 2026

ಶಿವಮೊಗ್ಗ: ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ (DCA), ಶಿವಮೊಗ್ಗ ವತಿಯಿಂದ 2026ರ ಏಪ್ರಿಲ್ 5ರಿಂದ ಏಪ್ರಿಲ್ 26ರವರೆಗೆ ಕ್ರಿಕೆಟ್ ಸಮರ್ ಕ್ಯಾಂಪ್ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಸಂಯೋಜಿತವಾಗಿರುವ ಈ ಸಂಸ್ಥೆಯು ಯುವ ಪ್ರತಿಭೆಗಳನ್ನು ಉತ್ತೇಜಿಸಲು ಈ ಶಿಬಿರವನ್ನು ನಡೆಸುತ್ತಿದೆ.

8 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಬಾಲಕರು ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಅನುಭವೀ ಕೋಚ್‌ಗಳ ಮಾರ್ಗದರ್ಶನದಲ್ಲಿ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಸೇರಿದಂತೆ ಸಮಗ್ರ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ. ಜೊತೆಗೆ ಪಂದ್ಯಾಭ್ಯಾಸ (ಮ್ಯಾಚ್ ಪ್ರಾಕ್ಟಿಸ್) ಹಾಗೂ ಫಿಟ್ನೆಸ್ ಮತ್ತು ಚುರುಕಿನ ತರಬೇತಿಗೂ ವಿಶೇಷ ಆದ್ಯತೆ ನೀಡಲಾಗುತ್ತದೆ.

ಕ್ರಿಕೆಟ್‌ಪ್ರಿಯ ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಅಭಿವೃದ್ಧಿಪಡಿಸಿಕೊಳ್ಳಲು ಮತ್ತು ವೃತ್ತಿಪರ ತರಬೇತಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಇಡೀ ವರ್ಷ ಕ್ರಿಕೆಟ್ ತರಬೇತಿ ಸೌಲಭ್ಯವೂ ಲಭ್ಯವಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಿತ್ಯಾನಂದ ಪೈ (ಮೊ: 9964725632) ಮತ್ತು ಐಡಿಯಲ್ ಗೋಪೀ (ಮೊ: 9844231234) ಅವರನ್ನು ಸಂಪರ್ಕಿಸಬಹುದು.

ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ನಾಗರಾಜ್ ಹಾಗೂ ಕಾರ್ಯದರ್ಶಿ ಎಚ್.ಎಸ್. ಸದಾನಂದ ಅವರು ಈ ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *