ಕ್ರಿಕೆಟ್ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ...

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

-

- Advertisment -spot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಸಹಯೋಗದೊಂದಿಗೆ ಆಯೋಜಿಸಲಾದ ಉಡುಪಿ ಜಿಲ್ಲಾ ಇಂಟರ್ ಕ್ಯಾಂಪಸ್ ಅಕಾಡೆಮಿ ಆಟಗಾರರ ಅಂಡರ್-23 ಲೆದರ್ ಬಾಲ್ ಟಿ-20 ನಾಕೌಟ್ ಮಾದರಿಯ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಪಂದ್ಯಾಟಕ್ಕೆ ಶನಿವಾರ ಬೈಂದೂರಿನ ಗಾಂಧಿ ಮೈದಾನದಲ್ಲಿ ಭರ್ಜರಿ ಚಾಲನೆ ದೊರೆಯಿತು.

ಪಂದ್ಯಾಟವನ್ನು ಕುಂದಾಪುರ ಟೋರ್ಪೋಡೋಸ್ ಸ್ಪೋರ್ಟ್ಸ್ ಕ್ಲಬ್ ಚೇರ್‌ಮನ್ ಗೌತಮ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ನೀಡುತ್ತದೆ ಎಂದರು.

ಮೊದಲ ದಿನ ನಡೆದ ಲೀಗ್ ಹಾಗೂ ನಾಕೌಟ್ ಹಂತದ ಪಂದ್ಯಗಳು ರೋಚಕತೆಯಿಂದ ಸಾಗಿದ್ದು, ಜಿಲ್ಲೆಯ ವಿವಿಧ ಕ್ಯಾಂಪಸ್‌ಗಳ ಪ್ರತಿಭಾವಂತ ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಕ್ರಿಕೆಟ್ ಅಭಿಮಾನಿಗಳಿಂದ ಪಂದ್ಯಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿದ್ದು, ಅಂತಿಮ ಕಾದಾಟದತ್ತ ತಂಡಗಳು ಕಣ್ಣಿಟ್ಟಿವೆ. ಪಂದ್ಯಾಟದ ನೇರ ಪ್ರಸಾರವನ್ನು ಸ್ಪೋರ್ಟ್ಸ್ ಕನ್ನಡ ಲೈವ್ ಮೀಡಿಯಾ ನಡೆಸುತ್ತಿದೆ.

ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3182 ಸಹಾಯಕ ಗವರ್ನರ್ ರೊ. ಐ. ನಾರಾಯಣ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಕಾರ್ಯದರ್ಶಿ ರೆನ್ ಟ್ರೆವರ್ ಡಯಾಸ್, ಮಾಜಿ ಕ್ರಿಕೆಟಿಗ ಪ್ರದೀಪ್ ವಾಜ್, ವಿಕ್ರಂ ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಕ ನಾರಾಯಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

3 × two =

Latest news

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...
- Advertisement -spot_imgspot_img

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

Must read

- Advertisement -spot_imgspot_img

You might also likeRELATED
Recommended to you