ಹಿರಿಯ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಅವರಿಗೆ ‘ಪತ್ರಿಕಾ ದಿನದ ಪ್ರಶಸ್ತಿ

ಹಿರಿಯ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಅವರಿಗೆ ‘ಪತ್ರಿಕಾ ದಿನದ ಪ್ರಶಸ್ತಿ

ಮಂಗಳೂರು, ಜುಲೈ 2: ಕನ್ನಡ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಕ್ರೀಡಾ ವರದಿಗಾರ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೋಮಶೇಖರ್ ಪಡುಕರೆ ಅವರಿಗೆ 2026ನೇ ಸಾಲಿನ ‘ಪತ್ರಿಕಾ ದಿನದ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜುಲೈ 9ರಂದು ಬ್ರಹ್ಮಾವರದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಆಯೋಜಿಸಿರುವ ‘ಪತ್ರಿಕಾ ದಿನಾಚರಣೆ ಕಾರ್ಯಕ್ರಮ’ದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ದಶಕಗಳಿಂದ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಸೋಮಶೇಖರ್ ಪಡುಕರೆ ಅವರು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾ ಸುದ್ದಿಗಳನ್ನು ಸಮಗ್ರವಾಗಿ ಜನರಿಗೆ ತಲುಪಿಸುವ ಮೂಲಕ ವಿಶೇಷ ಗುರುತಿಸಿಕೊಂಡಿದ್ದಾರೆ. ಕ್ರೀಡಾ ಬೆಳವಣಿಗೆ, ಪ್ರತಿಭೆಗಳ ಅನಾವರಣ ಹಾಗೂ ಕ್ರೀಡಾ ಚಟುವಟಿಕೆಗಳ ಪ್ರಚಾರ-ಪ್ರಸಾರದಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ.

ಅವರ ಸಾಧನೆ ಹಾಗೂ ಪತ್ರಿಕೋದ್ಯಮ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ಪತ್ರಕರ್ತರು, ಲೇಖಕರು, ಪ್ರಾಧ್ಯಾಪಕರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಸಂಜೆ 3 ಗಂಟೆಗೆ ನಡೆಯಲಿದೆ.

Leave a Reply

Your email address will not be published. Required fields are marked *