ಕ್ರಿಕೆಟ್ದಾವಣಗೆರೆ ಕ್ರಿಕೆಟ್ ಹಬ್ಬ-ನವೆಂಬರ್ 25-29 ರವರೆಗೆ ಎಸ್.ಎಸ್‌.ಶಾಮನೂರು ಡೈಮಂಡ್,ಶಿವಗಂಗಾ ಕಪ್-2020

ದಾವಣಗೆರೆ ಕ್ರಿಕೆಟ್ ಹಬ್ಬ-ನವೆಂಬರ್ 25-29 ರವರೆಗೆ ಎಸ್.ಎಸ್‌.ಶಾಮನೂರು ಡೈಮಂಡ್,ಶಿವಗಂಗಾ ಕಪ್-2020

-

- Advertisment -spot_img
ಕೊರೊನಾ ಹೊಡೆತದಿಂದ ಕಂಗೆಟ್ಟ ನಾಡಿನ ಜನತೆಗೆ ಅದರಲ್ಲೂ ಟೆನಿಸ್ ಬಾಲ್ ಕ್ರಿಕೆಟ್ ಪ್ರೇಮಿಗಳ ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.
ದಾವಣಗೆರೆ ಇಲೆವೆನ್ಸ್ ಹಾಗೂ ಜಿಲ್ಲಾ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ದಾವಣಗೆರೆಯ ವಿಧಾನಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮನವರ ಸವಿ ನೆನಪಿನ ಅಂಗವಾಗಿ,ದಾವಣಗೆರೆಯ ಕ್ರೀಡಾ ಪ್ರೋತ್ಸಾಹಕರಾದ ಜಯಪ್ರಕಾಶ್ ಗೌಡ  ಯಾನೆ ಜೆ.ಪಿ‌ ಹಾಗೂ ಶ್ರೀನಿವಾಸ್ ಶಿವಗಂಗಾ ಇವರೀರ್ವರ ದಕ್ಷ ಸಾರಥ್ಯದಲ್ಲಿ, ದಿನೇಶ್.ಕೆ.ಶೆಟ್ಟಿ,M.L.A ಆಪ್ತಕಾರ್ಯದರ್ಶಿ ಕುರುಡಿ ಗಿರೀಶ್ ರವರ ಸಹಕಾರದೊಂದಿಗೆ,ದಾಖಲೆಯ ಸತತ 13 ನೇ ಬಾರಿಗೆ ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 25 ರಿಂದ 29 ರ ವರೆಗೆ 5 ದಿನಗಳ ಕಾಲ ಹೊನಲು ಬೆಳಕಿನ
 “ಎಸ್‌.ಎಸ್.ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್-2020” ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಸತತ 13 ನೇ ಬಾರಿಗೆ ನಡೆಸಲ್ಪಡುವ ರಾಷ್ಟ್ರೀಯ ಮಟ್ಟದ ದಾವಣಗೆರೆಯ ಈ ಪಂದ್ಯಾವಳಿ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಅತ್ಯಂತ  ಅದ್ಧೂರಿ ಹಾಗೂ ವ್ಯವಸ್ಥಿತ ಪಂದ್ಯಾವಳಿಯೆಂದು ಮನೆಮಾತಾಗಿದೆ.ಕಳೆದ ಒಂದೂವರೆ ತಿಂಗಳಿಂದ ಹಾಲಪ್ಪ ದಾವಣಗೆರೆ ತಂಡ ಸುಸಜ್ಜಿತ ಕ್ರೀಡಾಂಗಣ ಹಾಗೂ ಪಿಚ್ ತಯಾರಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ರಾಜ್ಯದ ಬಲಿಷ್ಠ 32 ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಡಲಿದ್ದು,28 ಶನಿವಾರ ಸಂಜೆ 6 ಗಂಟೆಗೆ ವಿಶೇಷವಾಗಿ ಮುಂಬಯಿ ಇಲೆವೆನ್ ಹಾಗೂ ಕರ್ನಾಟಕ ಇಲೆವೆನ್ ತಂಡಗಳ ನಡುವಿನ ಪ್ರದರ್ಶನ ಪಂದ್ಯ ಕ್ರೀಡಾಭಿಮಾನಿಗಳ ಕುತೂಹಲವನ್ನು
ಇನ್ನಷ್ಟು ಹೆಚ್ಚಿಸಿದೆ.
ಶ್ಯಾಮನೂರು-ಶಿವಗಂಗಾ ಟ್ರೋಫಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 3.5 ಲಕ್ಷ ನಗದು,ದ್ವಿತೀಯ ಸ್ಥಾನಿ ತಂಡ 2.25 ಲಕ್ಷ ಹಾಗೂ ತೃತೀಯ ಸ್ಥಾನಿ 1.25 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡುವ ಆಟಗಾರರಿಗೆ ವಿಶೇಷ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಟೂರ್ನಮೆಂಟ್ ನ ನೇರ ಪ್ರಸಾರವನ್ನು M.Sports ಬಿತ್ತರಿಸಲಿದ್ದು,ಕಳೆದ 12 ವರ್ಷಗಳಿಂದ ದಾವಣಗೆರೆಯ ಜಿಲ್ಲೆಯ ಕ್ರೀಡಾ ಪ್ರೇಮಿಗಳ ಮನಸ್ಸನ್ನು ಗೆದ್ದ ಪ್ರಸಿದ್ಧ ವೀಕ್ಷಕ ವಿವರಣೆಕಾರ ಪ್ರಶಾಂತ್ ಅಂಬಲಪಾಡಿ ಹಾಗೂ ಹಿರಿಯ ಕಾಮೆಂಟೇಟರ್ ವಿನಯ್ ಉದ್ಯಾವರ ಭಾಗವಹಿಸಲಿದ್ದು,ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two − one =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you