ಭರವಸೆಯ ಬೆಳಕುಖ್ಯಾತ ವೀಕ್ಷಕ ವಿವರಣೆಗಾರ ಶಿವನಾರಾಯಣ್ ಐತಾಳ್ ಕೋಟ ಇವರಿಗೆ "ಕ್ರೀಡಾ ಕಲಾ...

ಖ್ಯಾತ ವೀಕ್ಷಕ ವಿವರಣೆಗಾರ ಶಿವನಾರಾಯಣ್ ಐತಾಳ್ ಕೋಟ ಇವರಿಗೆ “ಕ್ರೀಡಾ ಕಲಾ ವಲ್ಲಭ-2021” ಪ್ರಶಸ್ತಿ

-

- Advertisment -spot_img
ಕಳೆದ 30 ವರ್ಷಗಳಿಂದ ವೀಕ್ಷಕ‌ ವಿವರಣೆಗಾರರಾಗಿ ಹಾಗೂ 20 ವರ್ಷಗಳಿಂದ ಕೆ.ಎಸ್.ಸಿ.ಎ ಅಂಗೀಕೃತ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿತ್ತಿರುವ ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ್ ಐತಾಳ್ ಕೋಟ 2021 ನೇ ಸಾಲಿನ ಕ್ರೀಡಾ ಕಲಾ ವಲ್ಲಭ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮಾರ್ಚ್ 7 ರವಿವಾರದಂದು ಬೀಡಿನ ಗುಡ್ಡೆಯಲ್ಲಿ ನಡೆದ ವಿಪ್ರ ಸಮಾಜದ ಪ್ರತಿಷ್ಟಿತ ಕ್ರಿಕೆಟ್ ಪಂದ್ಯಾವಳಿ “ಶ್ರೀ ರಾಮ‌ ಟ್ರೋಫಿ-2021” ರ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭ ‌ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ,ಕಾರ್ಯದರ್ಶಿ ರಾಜೇಶ್ ಉಪಾಧ್ಯ,ಕೋಶಾಧಿಕಾರಿ ರಾಜ್ ಕುಮಾರ್ ಉಪಾಧ್ಯ ಹಾಗೂ ‌ಕಾರ್ಯದರ್ಶಿ ಯು.ಬಿ.ಶ್ರೀನಿವಾಸ ಭಾದ್ಯ ಉಪಸ್ಥಿತರಿದ್ದರು.
ಶಿವನಾರಾಯಣ್ ಐತಾಳ್ ಕೋಟ ವಿಶಿಷ್ಟ ಶೈಲಿಯ ಬ್ಯಾಟಿಂಗ್ (ದಿಲ್ಸ್ಕೂಪ್-ಶಿವಸ್ಕೂಪ್ ಹೊಡೆತಗಳು) ಹಾಗೂ‌ ಆಫ್ ಸ್ಪಿನ್ ಎಸೆತಗಾರರಾಗಿ ಗುರುತಿಸಿಕೊಂಡು ಇಲೆವೆನ್ ಅಪ್ ಕೋಟ ತಂಡದಲ್ಲಿ ಬಹಳಷ್ಟು ವರ್ಷಗಳ ಕಾಲ‌ ಸೇವೆ ಸಲ್ಲಿಸಿದ್ದರು.90 ರ ದಶಕದ ಸಮಯದಲ್ಲಿ ಹಿರಿಯ ವೀಕ್ಷಕ ವಿವರಣೆಕಾರರು ನೇಪಥ್ಯಕ್ಕೆ ಸರಿದ ಸಂದರ್ಭ ಮೈಕ್ ಹಿಡಿದು,ಕನ್ನಡ ವೀಕ್ಷಕ ವಿವರಣೆಗೆ ಚುರುಕು ಮುಟ್ಟಿಸಿ,ಕಳೆದ 30 ವರ್ಷಗಳಿಂದ
ಟೆನ್ನಿಸ್ಬಾಲ್ ಹಾಗೂ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಾಗಿ ಕರ್ನಾಟಕ ರಾಜ್ಯದ ವಿವಿಧೆಡೆ  ವೀಕ್ಷಕ ವಿವರಣೆ ನಡೆಸಿದ್ದಾರೆ.ಮಂಗಳೂರಿನಲ್ಲಿ ನಡೆಯುವ ಪ್ರತಿಷ್ಟಿತ M.P.L ಹಾಗೂ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್  ನಲ್ಲಿ ವೀಕ್ಷಕ ವಿವರಣೆಯ ನೇತೃತ್ವ ವಹಿಸಿದ್ದರು.ಕೆ.ಎಸ್.ಸಿ.ಎ ಅಂಗೀಕೃತ ಅಂಪಾಯರ್ ಆಗಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು   ಯು.ಎ.ಇ ರಾಷ್ಟ್ರದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.
ಇವರು 1996 ರಲ್ಲಿ “ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ” ವನ್ನು ಸ್ಥಾಪಿಸಿ ಕ್ರಿಕೆಟ್,ಚೆಸ್ ಹಾಗೂ ವಿವಿಧ
ಕ್ರೀಡಾ ಚಟುವಟಿಕೆಗಳನ್ನು ಸಂಘಟಿಸಿದ್ದು,ಸಾಲಿಗ್ರಾಮ ಜಾತ್ರೆಯ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 − six =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you