10.1 C
London
Tuesday, April 23, 2024
Homeಕ್ರಿಕೆಟ್ಭಾರತೀಯ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ : ಚೊಚ್ಚಲ ಪಂದ್ಯದಲ್ಲಿಯೇ ಶತಕ,...

ಭಾರತೀಯ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ : ಚೊಚ್ಚಲ ಪಂದ್ಯದಲ್ಲಿಯೇ ಶತಕ, 23 ವರ್ಷಗಳ ಕ್ರಿಕೆಟ್ ಬದುಕಿನ ಮಹತ್ತರ ಸಾಧನೆಯ ಜೊತೆಗೆ ಸಾಕಷ್ಟು ದಾಖಲೆಗಳು ಇವರ ಹೆಸರಿನಲ್ಲಿದೆ…

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ಮಿಥಾಲಿ ರಾಜ್ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಸುದೀರ್ಘ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಥಾಲಿ ರಾಜ್ ಪೂರ್ಣ ವಿರಾಮವಿಟ್ಟಿದ್ದಾರೆ.
ಮಿಥಾಲಿ ರಾಜ್ ತಮ್ಮ 16ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಂತವರು. ಚೊಚ್ಚಲ ಪಂದ್ಯದಲ್ಲಿಯೇ ಶತಕ ಸಿಡಿಸಿ ಮಿಂಚಿದ್ದ ಮಿಥಾಲಿ ರಾಜ್ ಮೊದಲ ಪಂದ್ಯದಲ್ಲೆ ವಿಶ್ವ ಮಹಿಳಾ ಕ್ರಿಕೆಟ್ ತನ್ನತ್ತ ತಿರುಗಿನೊಡುವಂತೆ ಮಾಡಿದವರು. ಮೊದಲ ಪಂದ್ಯದ ಅದ್ಭುತ ಪ್ರದರ್ಶನದಿಂದ ಮಿಥಾಲಿ ಹಿಂದಿರುಗಿ ನೋಡಲೇ ಇಲ್ಲ. ಪಂದ್ಯದಿಂದ ಪಂದ್ಯಕ್ಕೆ ಮನಮೋಹಕವಾಗಿ ಆಡಿದ ಮಿಥಾಲಿ ಮಹಿಳಾ ಕ್ರಿಕೆಟ್‌ನ ಅದೆಷ್ಟೋ ದಾಖಲೆಗಳನ್ನು  ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ.
*ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಮಹಿಳಾ ಆಟಗಾರ್ತಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ ಮಿಥಾಲಿ ರಾಜ್.*
ಹಾಗಾದರೆ ಮಿಥಾಲಿ ರಾಜ್ ಕ್ರಿಕೆಟ್ ಬದುಕಿನ ಕೆಲ ಮಹತ್ವದ ಸಾಧನೆಗಳೇನು? ಆ ಬಗ್ಗೆ ಕೆಲ ಮಾಹಿತಿಗಳು ಇಲ್ಲಿದೆ.
1999: ಮಿಥಾಲಿ ರಾಜ್ ತಮ್ಮ 16ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಐರ್ಲೆಂಡ್ ವಿರುದ್ಧ ಆಡಿದ ಆ ಚೊಚ್ಚಲ ಪಂದ್ಯದಲ್ಲಿಯೇ ಮಿಥಾಲಿ ಭರ್ಜರಿ ಶತಕ ಸಿಡಿಸಿದರು. ಅಜೇಯ 114 ರನ್‌ಗಳನ್ನು ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಮೊದಲ ಪಂದ್ಯದಲ್ಲಿಯೇ ಪ್ರದರ್ಶಿಸಿದರು.
2002: ಮಿಥಾಲಿ ರಾಜ್ 2002ರ ಆಗಸ್ಟ್‌ನಲ್ಲಿ ತಮ್ಮ 19ನೇ ವಯಸ್ಸಿನಲ್ಲಿ ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಟೌಂಟಾನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಮಿಥಾಲಿ 214 ರನ್ ಸಿಡಿಸಿ ದ್ವಿಶತಕದ ಜೊತೆಗೆ ಒಂದು ಇನಿಂಗ್ಸ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ  ದಾಖಲೆಯನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು.
( 2004ರಲ್ಲಿ ಈ ದಾಖಲೆಯನ್ನು ಪಾಕಿಸ್ತಾನದ ಆಟಗಾರ್ತಿ ಕಿರಣ್ ಬಲೂಚ್ ಮುರಿದರು‌)
2005: ಭಾರತ ತಂಡವನ್ನು ವಿಶ್ವಕಪ್‌ನಲ್ಲಿ ಮುನ್ನಡೆಸಿದ ಮಿಥಾಲಿ ರಾಜ್ ಭಾರತ ತಂಡವನ್ನು ಫೈನಲ್ ಹಂತದವರೆಗೆ ತಲುಪಿಸಿದ್ದರು. ದುರದೃಷ್ಟವಶಾತ್ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡಕ್ಕೆ ಶರಣಾಗುವ ಮೂಲಕ ವಿಶ್ವಕಪ್ ಕನಸನ್ನು ಭಗ್ನಗೊಂಡಿತು.
2008: ಭಾರತ ಮಹಿಳಾ ತಂಡ ಸತತ ನಾಲ್ಕನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಪಟ್ಟಕ್ಕೇರಿತು. ಈ ತಂಡದ ನಾಯಕತ್ವ ಕೂಡ ಮಿಥಾಲಿ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ 3000 ರನ್‌ಗಳ ಮೈಲಿಗಲ್ಲನ್ನು ಮಿಥಾಲಿ ದಾಟಿದ್ದರು.
2013: ಈ ವರ್ಷ ನಡೆದ ಮಹಿಳಾ ವಿಶ್ವಕಪ್‌ನ ಸಂದರ್ಭದಲ್ಲಿ ಮಿಥಾಲಿ ರಾಜ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕದ ಆಟಗಾರ್ತಿ ಎನಿಸಿಕೊಂಡರು.
2015: ಭಾರತ ಸರ್ಕಾರ 2015ರಲ್ಲಿ ಭಾರತೀಯ ಕ್ರಿಕೆಟ್‌ಗೆ ನೀಡಿದ ಸೇವೆಗಾಗಿ ಮಿಥಾಲಿ ರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು.
2017: ಮಹಿಳಾ ಏಕದಿನ ಇತಿಹಾಸದಲ್ಲಿ 6000 ರನ್‌ಗಳ ಮೈಲಿಗಲ್ಲು ದಾಟಿದ ಮೊದಲ ಮಹಿಳಾ ಕ್ರಿಕೆಟರ್ ಎನಿಸಿದರು ಮಿಥಾಲಿ ರಾಜ್.
2017: ಮಿಥಾಲಿ ರಾಜ್ ಭಾರತ ತಂಡದ ನಾಯಕಿಯಾಗಿ ಎರಡನೇ ಬಾರಿಗೆ 2017ರಲ್ಲಿ ವಿಶ್ವಕಪ್‌ನ ಫೈನಲ್‌ಗೆ ತಲುಪಿಸಿದರು. ಈ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 9 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು. 2017ರಲ್ಲಿ ಐಸಿಸಿ ಪ್ರಕಟಿಸಿದ ಮಹಿಳಾ ತಂಡದಲ್ಲಿಯೂ ಸ್ಥಾನವನ್ನು ಪಡೆದುಕೊಂಡರು.
2019: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 20 ವರ್ಷಗಳನ್ನು ಪೂರೈಸಿದ ಪ್ರಥಮ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಂಬ ದಾಖಲೆಯನ್ನು ಬರೆದರು.
2022: 22 ವರ್ಷ 274 ದಿನಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಥಾಲಿ ರಾಜ್ 2022ರ ಜೂನ್ 8ರಂದು ನಿವೃತ್ತಿ ಘೋಷಣೆ ಮಾಡಿದ್ದಾರೆ
  ತಮ್ಮ ಸುದೀರ್ಘ ಕ್ರಿಕೆಟ್ ಬದುಕಿನಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ನ ಪ್ರಮುಖ ಆಟಗಾರ್ತಿಯಾಗಿದ್ದ ಮಿಥಾಲಿ ರಾಜ್ ಇನ್ನೂ ಅತ್ಯುತ್ತಮ ಆಟದ ಪ್ರದರ್ಶನ ನೀಡುತ್ತಿದ್ದ ಸಮಯದಲ್ಲೇ ನಿವೃತ್ತಿ ಘೋಷಿಸಿ ಅಚ್ಚರಿಗೆ ಕಾರಣರಾಗಿರುವುದರ ಜೊತೆಗೆ ಅವರ ಅಸಂಖ್ಯಾತ ಅಭಿಮಾನಿಗಳಿಗೆ ನಿರಾಶೆಯಾಗಿದೆ . ಅದೇನೆ ಇರಲಿ ಭಾರತ ಮಹಿಳಾ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರ್ತಿ ಮಿಥಾಲಿ ರಾಜ್ ಅವರ ನಿವೃತ್ತಿ ನಂತರದ ಜೀವನವು ಸುಖಕರವಾಗಿರಲಿ…..
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Latest stories

LEAVE A REPLY

Please enter your comment!
Please enter your name here

19 + thirteen =