ಸ್ಪೋರ್ಟ್ಸ್ಬಿಂದ್ಯಾರಾಣಿ ದೇವಿಗೆ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ: ಭಾರತದ ಮಡಿಲಿಗೆ...

ಬಿಂದ್ಯಾರಾಣಿ ದೇವಿಗೆ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ: ಭಾರತದ ಮಡಿಲಿಗೆ ನಾಲ್ಕನೇ ಪದಕ

-

- Advertisment -spot_img
ವೇಟ್‍ಲಿಫ್ಟಿಂಗ್‌ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ನಾಲ್ಕಕ್ಕೆ ಏರಿಕೆ ಕಂಡಿದೆ.
ಮಹಿಳೆಯರ 55 ಕೆಜಿ ವಿಭಾಗದಲ್ಲಿ ಒಟ್ಟು 202 ಕೆಜಿ ಭಾರ ಎತ್ತಿದ ಬಿಂದ್ಯಾರಾಣಿ ದೇವಿ ರಜತ ಪದಕಕ್ಕೆ ಮುತ್ತಿಕ್ಕಿದರು. ಇದೇ ವಿಭಾದಲ್ಲಿ ಒಟ್ಟು 203 ಕೆ.ಜಿ ಭಾರ ಎತ್ತಿದ ನೈಜೀರಿಯಾದ ಒಲರಿನೊಯ್ ಚಿನ್ನದ ಪದಕ ಗೆದ್ದರು. ಬಿಂದ್ಯಾರಾಣಿ ಬೆಳ್ಳಿ ಪದಕ ಸಾಧನೆಯೊಂದಿಗೆ ಭಾರತ ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ವೇಟ್‍ಲಿಫ್ಟಿಂಗ್ ವಿಭಾಗ ಒಂದರಲ್ಲೇ 4 ಪದಕವನ್ನು ಭಾರತ ಗೆದ್ದಿದೆ. ನಿನ್ನೆ ಮಹಿಳೆಯರ 44 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದರು.
ಪುರುಷರ ವಿಭಾಗದಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. 55 ಕೆಜಿ ವಿಭಾಗದ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 248 ಕೆಜಿ ಭಾರ ಎತ್ತುವ ಮೂಲಕ 21 ವರ್ಷದ ಸಂಕೇತ್ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದರು. ಈ ಮೂಲಕ ಭಾರತ ಒಂದೇ ದಿನ ನಾಲ್ಕು ಪದಕ ಗೆದ್ದು ಪದಕ ಬೇಟೆ ಮುಂದುವರಿಸಿದೆ. ಪದಕ ಗೆದ್ದ ಕ್ರೀಡಾಪಟುಗಳ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

4 + 2 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you