ಕ್ರಿಕೆಟ್ಫ್ರೆಂಡ್ಸ್ ಬೆಂಗಳೂರು ತಂಡದ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಐತಿಹಾಸಿಕ-ಫ್ರೆಂಡ್ಸ್ ಬೆಂಗಳೂರು ಕಪ್-2023

ಫ್ರೆಂಡ್ಸ್ ಬೆಂಗಳೂರು ತಂಡದ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಐತಿಹಾಸಿಕ-ಫ್ರೆಂಡ್ಸ್ ಬೆಂಗಳೂರು ಕಪ್-2023

-

- Advertisment -spot_img
*ಆಹ್ವಾನಿತ ತಂಡಗಳ ನಡುವಿನ ರೋಚಕ ಹಣಾಹಣಿ-ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಗರಿಷ್ಟ ನಗದು ಬಹುಮಾನ*
ಟೆನಿಸ್ಬಾಲ್ ಕ್ರಿಕೆಟ್ ನ ಇತಿಹಾಸದ ಪುಟಗಳಲ್ಲಿ ಸುಮಾರು ಎರಡೂವರೆಗಳ ದಶಕಗಳ ಯಶಸ್ಸಿನ ಯಶೋಗಾಥೆ ಬರೆದು, ರಾಜ್ಯದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಸಂಪಾಸಿದ ತಂಡ ಫ್ರೆಂಡ್ಸ್ ಬೆಂಗಳೂರು.ಸಹೃದಯಿ ಕ್ರೀಡಾ ಪೋಷಕರಾದ ರೇಣು ಗೌಡರ ಸಾರಥ್ಯದಲ್ಲಿ ರಾಜ್ಯದಾದ್ಯಂತ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಜಯಿಸಿ ದಾಖಲೆ ಬರೆದ ಫ್ರೆಂಡ್ಸ್ ಬೆಂಗಳೂರು ಈ ಬಾರಿ ವಿನೂತನ ಮೈಲಿಗಲ್ಲನ್ನು ಸ್ಥಾಪಿಸಲು ಸಜ್ಜಾಗಿದೆ.
ಫ್ರೆಂಡ್ಸ್ ಬೆಂಗಳೂರು ತಂಡ ಹಿರಿಯ-ಕಿರಿಯರು,ತಂಡದ ಬೆಂಬಲಿಗರ ಸಹಯೋಗದೊಂದಿಗೆ 2023 ಜನವರಿ
26,27,28,29 ರಂದು ಪೀಣ್ಯ 2 ನೇ ಹಂತದ ಬಳಿ ಇರುವ ಮೈದಾನದಲ್ಲಿ ಪಂದ್ಯಾಟ ನಡೆಸಲು ಭರದಿಂದ ಸಿದ್ಧತೆ ನಡೆಯುತ್ತಿದೆ.
ರಾಷ್ಟ್ರೀಯ ಮಟ್ಟದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ನಡೆಯಲಿರುವ ಈ ಐತಿಹಾಸಿಕ ಕ್ರಿಕೆಟ್ ಪಂದ್ಯಾವಳಿ
ಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ತಂಡ ಗರಿಷ್ಠ ನಗದು 5,05,000 ರೂ,ದ್ವಿತೀಯ 2,50,000 ನಗದು ಬಹುಮಾನ ಸಹಿತ ವಿಶಿಷ್ಟ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
*”ಇತ್ತೀಚಿನ ದಿನಗಳಲ್ಲಿ ತಂಡದ ಮಾಲೀಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ಮನಗಂಡು, ಫ್ರೆಂಡ್ಸ್ ಬೆಂಗಳೂರು ಈ ಪಂದ್ಯಾಟದಲ್ಲಿ ಈ ಬಗ್ಗೆ ವಿಶಿಷ್ಟವಾದ ಯೋಜನೆಗಳನ್ನು ರೂಪಿಸಲಿದ್ದು,
ತಮ್ಮಂತೆಯೇ ಕಳೆದ ಎರಡು ದಶಕಗಳಿಂದ ತಂಡಗಳನ್ನು ಮುನ್ನಡೆಸುತ್ತಿರುವ ತಂಡದ ವ್ಯವಸ್ಥಾಪಕರಿಗೆ ಈ ಪಂದ್ಯಾಟ ಅರ್ಪಿಸಲಾಗುವುದು”ಎಂದು ತಂಡದ ವ್ಯವಸ್ಥಾಪಕರು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen − twelve =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you