ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರಿಕೆಟ್ ಕಾಶಿ ಕುಂದಾಪುರ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ವಿಶ್ವಕರ್ಮ...

ಕ್ರಿಕೆಟ್ ಕಾಶಿ ಕುಂದಾಪುರ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ವಿಶ್ವಕರ್ಮ ಟ್ರೋಫಿ-2023

-

- Advertisment -spot_img
ಕುಂದಾಪುರ- ಅಶೋಕ್ ಆಚಾರ್ ಮಾರ್ಗೋಳಿ ಇವರ ಸಾರಥ್ಯದಲ್ಲಿ,
ಕರ್ನಾಟಕ ವಿಶ್ವಕರ್ಮ ಸಮಾಜದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅತೀ ಗರಿಷ್ಠ ಮೊತ್ತದ ಬಹುಮಾನದ,ಹೊನಲು ಬೆಳಕಿನ ರಾಜ್ಯ ಮಟ್ಟದ 60 ಗಜಗಳ ಕ್ರಿಕೆಟ್ ಪಂದ್ಯಾಟ ವಿಶ್ವಕರ್ಮ ಟ್ರೋಫಿ-2023 ಆಯೋಜಿಸಲಾಗಿದೆ.
ಜನವರಿ 14 ಮತ್ತು 15 ರಂದು ಕ್ರಿಕೆಟ್ ಕಾಶಿ ಕುಂದಾಪುರದ ಗಾಂಧಿ ಮೈದಾನದಲ್ಲಿ,ಲೀಗ್ ಮಾದರಿಯಲ್ಲಿ ಈ ಪಂದ್ಯಾಟ ಹೊನಲು ಬೆಳಕಿನಲ್ಲಿ ಸಾಗಲಿದ್ದು,ಹೊಸನಗರ,ಉಡುಪಿ,ಮಂಗಳೂರು,ಕುಂದಾಪುರ ಮತ್ತು ಕಾರ್ಕಳ ಪರಿಸರದ ವಿಶ್ವಕರ್ಮ ಸಮಾಜದ ಒಟ್ಟು 20 ತಂಡಗಳು ಭಾಗವಹಿಸಲಿದೆ.
ಪ್ರಥಮ‌ ಸ್ಥಾನಿ 1,03,333 ರೂ ಮತ್ತು ದ್ವಿತೀಯ ಸ್ಥಾನಿ 55,555 ರೂ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ,ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುತ್ತಿದೆ ಹಾಗೂ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾದ ಆಟಗಾರ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ವಿಶ್ವಕರ್ಮ ಸಮಾಜದ ಗಣ್ಯಾತಿಗಣ್ಯರು ಆಗಮಿಸಲಿದ್ದು,ವೇದಿಕೆಯಲ್ಲಿ ವಿಶ್ವಕರ್ಮ ಸಮಾಜದ ಸಾಧಕರಿಗೆ ಗೌರವ ಹಾಗೂ ಅಶಕ್ತರಿಗೆ ಧನಸಹಾಯ ವಿತರಿಸಲಾಗುತ್ತಿದೆ.
ಪಂದ್ಯಾಟದ ನೇರ ಪ್ರಸಾರ See4 ಯೂ ಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × four =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you