ಕ್ರಿಕೆಟ್ಯುವಕರನ್ನು ಕ್ರೀಡೆಯತ್ತ ಉತ್ತೇಜಿಸುವ ಸಲುವಾಗಿ ಟೀಮ್ ಬಜ್ಪೆ ಲೆಜೆಂಡ್ಸ್ ಆಶ್ರಯದಲ್ಲಿ B.P.L-2023

ಯುವಕರನ್ನು ಕ್ರೀಡೆಯತ್ತ ಉತ್ತೇಜಿಸುವ ಸಲುವಾಗಿ ಟೀಮ್ ಬಜ್ಪೆ ಲೆಜೆಂಡ್ಸ್ ಆಶ್ರಯದಲ್ಲಿ B.P.L-2023

-

- Advertisment -spot_img
ಮಂಗಳೂರು-ಟೀಮ್ ಬಜ್ಪೆ ಲೆಜೆಂಡ್ಸ್ ಇವರ ಆಶ್ರಯದಲ್ಲಿ ಯುವಜನತೆಯಲ್ಲಿ ಮಾದಕ ವ್ಯಸನದ ಬಗ್ಗೆ ಜಾಗ್ರತಿ ಮತ್ತು ಪರಸ್ಪರ ಸೌಹಾರ್ದತೆ ಹಾಗೂ ಕಿರಿಯ ಕಿರಿಯ ಆಟಗಾರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಸಲುವಾಗಿ ಮೊದಲ ಬಾರಿಗೆ ಬಜಪೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿದ್ದಾರೆ.
ಬಜ್ಪೆಯಲ್ಲಿ ನಡೆಯುವ ಬಿಪಿಎಲ್ ಚಾಂಪಿಯನ್ಸ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಹೊನಲು ಬೆಳಕಿನ ಪಂದ್ಯಾಕೂಟವಾಗಿದ್ದು ನವೆಂಬರ್ 17, 18 ಮತ್ತು 19 ರಂದು ನಡೆಯಲಿದ್ದು, 40 ವರ್ಷ ಮೇಲ್ಪಟ್ಟ ಹಿರಿಯರಿಗೆ ಅಂಡರ್ ಆರ್ಮ್ ಮಾದರಿ ಹಾಗೂ 15 ವರ್ಷಕ್ಕಿಂತ ಕಿರಿಯರಿಗೆ  ಓವರ್ ಆರ್ಮ್ ಪಂದ್ಯಾ ಕೂಟ  ಹೊನಲು ಬೆಳಕಿನಲ್ಲಿ ನಡೆಯಲಿದೆ. ವಿಜೇತರಿಗೆ ಆಕರ್ಷಕ ‌ನಗದು ಬಹುಮಾನಗಳ ಜೊತೆ  ಟ್ರೋಫಿಗಳನ್ನು ನೀಡಿ ಗೌರವಿಸಲಾಗುವುದು.
ನವೆಂಬರ್ 17 ಶುಕ್ರವಾರ ಸಂಜೆ  4.30 ಗಂಟೆಗೆ ಸರಿಯಾಗಿ ಅದ್ಧೂರಿಯ ಉದ್ಘಾಟನಾ ಸಮಾರಂಭ ನಡೆಯಲಿದೆ.ಬಜ್ಪೆ,ಸುಂಕದಕಟ್ಟೆ,ಭಟ್ರಕೆರೆ,ಅಡ್ಯಪಾಡಿ,
ಪೊರ್ಕೋಡಿ,ಕರಂಬಾರ್,ಶಾಂತಿಗುಡ್ಡೆ,ಪೆರ್ಮುದೆ,
ಕೊಂಚಾರ್,ಸೌಹಾರ್ದ ನಗರ ಇಲ್ಲಿಯ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.ಆಯೋಜಕರ ಪ್ರಕಾರ, ಈ ಪಂದ್ಯಾವಳಿಯ ಉದ್ದೇಶವು ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು. ಈ ಸಂದರ್ಭದಲ್ಲಿ ಮಾತನಾಡಿದ ಆಸಿಫ್ ಬಜ್ಪೆ  ಮತ್ತು ಜುಬೇರ್ ಬಜ್ಪೆ  “ಪ್ರಸ್ತುತ ದಿನಗಳಲ್ಲಿ ನಮ್ಮ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗಿದ್ದಾರೆ. ಯುವಕರು ತಮ್ಮನ್ನು ತಾವು ಬ್ಯುಸಿ ಮತ್ತು ಫಿಟ್ ಆಗಿರಲು ಕ್ರೀಡಾ ಚಟುವಟಿಕೆಗಳಲ್ಲಿ ನಿರತರಾಗಿರಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮ ಯುವಕರನ್ನು ಕ್ರೀಡಾ ಚಟುವಟಿಕೆಗಳಲ್ಲಿ ನಿರತರನ್ನಾಗಿಸುವುದು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ  ಉದ್ದೇಶ ಹಾಗೂ ಈ ಪಂದ್ಯಾವಳಿಯಲ್ಲಿ ಸಂಗ್ರಹವಾದ ಹಣವನ್ನು ಬಡಕುಟುಂಬಗಳಿಗೆ ನೀಡುವ ಉದ್ದೇಶವು ಕೂಡ  ಇದೆ.
ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ವಿಶೇಷವಾದ ಫುಡ್ ಕೋರ್ಟ್ ಕ್ರೀಡಾ ಪ್ರೇಕ್ಷಕರಿಗೆ ರಸದೌತಣವನ್ನು ನೀಡಲಿದೆ ಎಂದರು.”
ಹೆಚ್ಚಿನ ವಿವರಗಳಿಗಾಗಿ ಹಕೀಮ್-9844135947,
ಅಖ್ತರ್-9986754468,ನೌಶಾದ್-8867222095,ಕೆ.ಹೆಚ್‌.ರಹೀಮ್-9353319205 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಪಂದ್ಯಾ ಕೂಟದ ನೇರಪ್ರಸಾರ ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಪಂದ್ಯಾಟದ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಸ್ಪೋರ್ಟ್ಸ್ ಕನ್ನಡ ಇತ್ತೀಚೆಗೆ ನಡೆಸಿದ ಟೀಮ್ ಬಜ್ಪೆ ಲೆಜೆಂಡ್ಸ್ ಸಂದರ್ಶನ ವೀಕ್ಷಿಸಲು Sportskannadatv ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಹಾಗೂ ಶೇರ್ ಮಾಡಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen + 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you