ಕ್ರಿಕೆಟ್ಗೆಲುವಿನ ಕನಸು ಮತ್ತೆ ಭಗ್ನ : ಇಂಗು ತಿಂದ ಮಂಗನಂತಾದ ಪಾಕ್..!

ಗೆಲುವಿನ ಕನಸು ಮತ್ತೆ ಭಗ್ನ : ಇಂಗು ತಿಂದ ಮಂಗನಂತಾದ ಪಾಕ್..!

-

- Advertisment -spot_img
ವಿಶ್ವಕಪ್  ಟೂರ್ನಮೆಂಟ್‌ನಲ್ಲಿ ಜೀವಂತವಾಗಿರಲು ಪಾಕಿಸ್ತಾನ ತನ್ನ ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇ ಬೇಕಾಗಿತ್ತು.ಸೋಲಿನ ಸರಪಳಿ ಕಳಚಲು ಬಾಬರ್ ಪಡೆ ಬಲಿಷ್ಠ ದಕ್ಷಿಣ ಆಫ್ರಿಕಕ್ಕೆ ಸವಾಲಿನ ಗುರಿ ನೀಡಿತ್ತು.
ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವೆ ಕೊನೆ ಕ್ಷಣದಲ್ಲಿ ಪಂದ್ಯ ರೋಚಕವಾಯಿತು. ಪಾಕಿಸ್ತಾನಕ್ಕೆ ಒಂದು ವಿಕೆಟ್ ಅಗತ್ಯವಿತ್ತು.ಆದರೆ ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ ಒಂದು ಬೌಂಡರಿ ಬಾರಿಸಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್‌ಗೆ 271 ರನ್‌ಗಳಿಗೆ ತೆಗೆದುಕೊಂಡು ಹೋಗಿ ಪಂದ್ಯವನ್ನು ಗೆದ್ದರು.ಈ ರೋಚಕ ಪಂದ್ಯದಲ್ಲಿ ಪಾಕಿಸ್ತಾನ 1 ವಿಕೆಟ್‌ನಿಂದ  ಸೋಲನುಭವಿಸಬೇಕಾಯಿತು. ಪಾಕ್ ತಂಡ ಈಗ ಬಹುತೇಕ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ.
 *ಗೆದ್ದೇ ಬಿಟ್ವಿ ಅಂತಿದ್ದ ಪಾಕಿಸ್ತಾನಕ್ಕೆ ಗುಮ್ಮಿದ ದ. ಆಫ್ರಿಕಾದ ‘ಮಹಾರಾಜ’..!*
ರಣರೋಚಕ ಪಂದ್ಯದಲ್ಲಿ ಹೋರಾಟದ ಪ್ರದರ್ಶನ ನೀಡಿದರೂ ಪಾಕಿಸ್ತಾನಕ್ಕೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಯ ಒಂದು  ವಿಕೆಟ್ ಪಡೆಯಲು ವಿಫಲವಾದ ಪಾಕಿಸ್ತಾನ ತಂಡ ಗೆಲುವಿನ ಅತ್ಯಂತ ಸನಿಹಕ್ಕೆ ಬಂದು ಶರಣಾಯಿತು.’ಸೆಮಿ’ ಕನಸು ಕನಸಾಗಿಯೇ ಉಳಿಯಿತು.ಗೆಲುವಿನ  ಸನಿಹದಲ್ಲಿದ್ದ  ಪಾಕ್‌ಗೆ ದಕ್ಷಿಣ ಆಫ್ರಿಕಾದ  ಟೈಲೆಂಡರ್ ಗಳು ಶಾಕ್ ನೀಡಿದರು. ಬಾಬರ್ ಪಡೆಯ ಸೋಲಿನ ಸರಪಳಿ ಮುಂದುವರೆಯುತ್ತಾ ಹೋಯಿತು.
ಸತತ 4ನೇ ಲೀಗ್ ಪಂದ್ಯವನ್ನು ಸೋತಿರುವ ಪಾಕಿಸ್ತಾನದ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ಅವಕಾಶ ಬಹುತೇಕ ಮುಗಿದಂತೆ ಕಾಣುತ್ತಿದೆ. ಪಾಕಿಸ್ತಾನವು ಚೆನ್ನೈನಲ್ಲಿ ಕಳಪೆ ಆಟ ಆಡಿ  ಈ ಸ್ಥಳದಲ್ಲಿ ಎರಡು ಬ್ಯಾಕ್-ಟು-ಬ್ಯಾಕ್ ಪಂದ್ಯಗಳನ್ನು ಕಳೆದುಕೊಂಡಿತು. ಸೋಮವಾರ ಚೆನ್ನೈನಲ್ಲಿ ಅಫ್ಘಾನಿಸ್ತಾನ ಕೂಡ ಪಾಕಿಸ್ತಾನವನ್ನು ಸದೆ ಬಡೆದಿದ್ದು ಪಾಕ್ ಪೇಚಾಟ ಮುಂದುವರೆದಿದೆ.
ವಿಶ್ವಕಪ್‌ನಲ್ಲಿ ಪಾಕಿಸ್ತಾನಕ್ಕೆ ಇದು ಸತತ ನಾಲ್ಕನೇ ಸೋಲು. ಭಾರತ ಮತ್ತು ಆಸ್ಟ್ರೇಲಿಯಾದ ನಂತರ, ಪಾಕಿಸ್ತಾನ ತಂಡವನ್ನು ಅಫ್ಘಾನಿಸ್ತಾನ ಸೋಲಿಸಿತ್ತು. ಮತ್ತು ಈಗ ದಕ್ಷಿಣ ಆಫ್ರಿಕಾ ಹತ್ತಿರ ಬಂದು ಒಂದು ವಿಕೆಟ್‌ನಿಂದ ಸೋಲಿಸಿತು. ಈ ಸೋಲು ಪಾಕಿಸ್ತಾನಕ್ಕೆ ಹೆಚ್ಚು ತೊಂದರೆಯಾಗಿದೆ.ಸೋಲನುಭವಿಸಿದ ಪಾಕಿಸ್ತಾನ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಪಾಕಿಸ್ತಾನವು ಇದೀಗ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಿಂದ ಬಹುತೇಕ ಹೊರಗಿದೆ, ಅವರಿಗೆ ಕೇವಲ ಮೂರು ಪಂದ್ಯಗಳು ಉಳಿದಿವೆ.
ನಾವು ಸೆಮಿಸ್ ಗೆ ರೀಚ್ ಆಗ್ತೇವೆ, ನಾವು ಫೈನಲ್ ನಲ್ಲಿ ಮತ್ತೆ ಭಾರತವನ್ನು ಎದುರಿಸಲು ಕಾತರರಾಗಿದ್ದೇವೆ, ಫೈನಲ್ ನಲ್ಲಿ ಮತ್ತೆ ಭೇಟಿಯಾಗೋಣ ಎನ್ನುತ್ತಿದ್ದ ಪಾಕಿಗಳಿಗೆ ಭಾರಿ ಮುಖಭಂಗವಾಗಿದೆ.  ಪಾಕಿನ ‘ಸೆಮಿ’ ಕನಸು ಸರ್ವನಾಶವಾಗಿದೆ !😂
✍️ ಸುರೇಶ್ ಭಟ್, ಮೂಲ್ಕಿ
ಟೀಂ ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × four =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...
- Advertisement -spot_imgspot_img

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

Must read

- Advertisement -spot_imgspot_img

You might also likeRELATED
Recommended to you