ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರೀಡೆಯಿಂದ ಯುವಕರ ಭವಿಷ್ಯ ರೂಪುಗೊಳ್ಳುತ್ತದೆ-ಗೌತಮ್ ಶೆಟ್ಟಿ

ಕ್ರೀಡೆಯಿಂದ ಯುವಕರ ಭವಿಷ್ಯ ರೂಪುಗೊಳ್ಳುತ್ತದೆ-ಗೌತಮ್ ಶೆಟ್ಟಿ

-

- Advertisment -spot_img
ಕುಂದಾಪುರ-ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ 2 ದಿನವಾದ ಮಂಗಳವಾರ ನಡೆದ ಹೈಸ್ಕೂಲ್ ವಿಭಾಗದ ಪಂದ್ಯಾಟದಲ್ಲಿ ಟಿ‌‌‌.ಎ ಪೈ ಪ್ರೌಢಶಾಲೆ ಉಡುಪಿ ಜಯ ಸಾಧಿಸಿತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಟಿ.ಸಿ‌.ಎ ಉಡುಪಿ ಅಧ್ಯಕ್ಷ ಗೌತಮ್ ಶೆಟ್ಟಿ “ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ,ಸೋತಾಗ ಕುಗ್ಗದೇ ಗೆದ್ದಾಗ ಹಿಗ್ಗದೆ,ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ” ಎಂದರು.
ಹೈಸ್ಕೂಲ್ ವಿಭಾಗದಲ್ಲಿ ಒಟ್ಟು ಎಂಟು ತಂಡಗಳ ನಡುವೆ ಲೀಗ್ ಹಂತದಲ್ಲಿ ರೋಚಕ ಹಣಾಹಣಿ ಸಾಗಿತ್ತು.ಉಪಾಂತ್ಯ ಪಂದ್ಯದಲ್ಲಿ
ಗ್ರೀನ್ ಪಾರ್ಕ್ ಹಿರಿಯಡ್ಕ-ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯನ್ನು ಹಾಗೂ ಟಿ.ಎ.ಪೈ-ಸೈಲಸ್ ಉಡುಪಿ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
*ವೈದಿಕ್ ಶೆಟ್ಟಿ ಸಮಯೋಚಿತ ಆಟ-ಟಿ.ಎ ಪೈ ತಂಡ ಚಾಂಪಿಯನ್*
ಫೈನಲ್ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಗ್ರೀನ್ ಪಾರ್ಕ್ ಹೈಸ್ಕೂಲ್ ಹಿರಿಯಡ್ಕ
ಪವನ್ 34 ರನ್ ನೆರವಿನಿಂದ ನಿಗದಿತ 10 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತ್ತು.
‌ಇದಕ್ಕುತ್ತರವಾಗಿ ಟಿ‌.ಎ ಪೈ ತಂಡ ವೈದಿಕ್ ಶೆಟ್ಟಿ ಅಜೇಯ 35  ರನ್ ಗಳ ಜವಾಬ್ದಾರಿಯುತ ಆಟದ ನೆರವಿನಿಂದ ಕೊನೆಯ ಓವರ್ ನಲ್ಲಿ ಜಯ ಸಾಧಿಸಿತು.
ಸೈಲಸ್ ಉಡುಪಿ ಮತ್ತು ಗುರುಕುಲ ವಕ್ವಾಡಿ ತಂಡ ಮೂರನೇ ಸ್ಥಾನ ಪಡೆದುಕೊಂಡರು.
ಫೈನಲ್ ನ ಪಂದ್ಯಶ್ರೇಷ್ಟ ಮತ್ತು ಬೆಸ್ಟ್ ಬ್ಯಾಟರ್ ಪ್ರಶಸ್ತಿ ವೈದಿಕ್ ಶೆಟ್ಟಿ, ಗ್ರೀನ್ ಪಾರ್ಕ್ ನ ಮಾಝಿನ್ ಬೆಸ್ಟ್ ಬೌಲರ್ ಹಾಗೂ ಪವನ್ ಗ್ರೀನ್ ಪಾರ್ಕ್ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಬಹುಮಾನ ವಿತರಣಾ ವೇದಿಕೆಯಲ್ಲಿ ರಮೇಶ್  ಶೆಟ್ಟಿ, ಮನೋಜ್ ನಾಯರ್,ಕೆ.ಪಿ ಸತೀಶ್, ರಾಘವೇಂದ್ರ ಚರಣ್ ನಾವಡ,ನಾರಾಯಣ ಶೆಟ್ಟಿ ಮಾರ್ಕೋಡು,
ಭಾಸ್ಕರ ಆಚಾರ್,ನಾಗೇಶ್ ನಾವಡ,ಸ್ಪೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್,ಶಿವನಾರಾಯಣ ಐತಾಳ್ ಕೋಟ,ಶ್ರೀಕಾಂತ್, ಸುಕೇಶ್ ಮತ್ತು ಟಿ‌.ಸಿ.ಎ ಪದಾಧಿಕಾರಿಗಳು,ಸದಸ್ಯರು ಮತ್ತು ಪಂದ್ಯಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಪೋರ್ಟ್ಸ್ ಕನ್ನಡ ಟಿ.ವಿ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಂಡಿತು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 2 =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you