ಕ್ರಿಕೆಟ್ಆರ್‌ಸಿಬಿ- ದಿ ಕ್ವೀನ್ಸ್ ಆಫ್ ದಿ ಫೀಲ್ಡ್!

ಆರ್‌ಸಿಬಿ- ದಿ ಕ್ವೀನ್ಸ್ ಆಫ್ ದಿ ಫೀಲ್ಡ್!

-

- Advertisment -spot_img
2024ರ ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಿದವು.  ಕೊನೆಯ ಹಂತದವರೆಗೂ ಬಾರಿ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ  ರಾಯಲ್ ಚಾಲೆಂಜರ್ಸ್ ಡೆಲ್ಲಿ ಕ್ಯಾಪಿಟಲ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿ, ಚೊಚ್ಚಲ ಪ್ರಶಸ್ತಿಯನ್ನು ಎತ್ತಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ  ನೀಡಿದ್ರು, ಆರ್‌ಸಿಬಿಯ ನಮ್ಮ ಕನ್ನಡತಿ ಶ್ರೇಯಾಂಕಾ ಪಾಟೀಲ್ DCಯ ಬ್ಯಾಟಿಂಗ್ ಲೈನ್ ಅಪ್ ಗೆ ಬ್ರೇಕ್ ನೀಡಿದರು. RCB ಬೌಲಿಂಗ್ ದಾಳಿಗೆ DC ತತ್ತರಗೊಂಡಿತು. ಬೆಂಕಿ ಬೌಲಿಂಗ್ ಮಾಡಿದ ಆರ್ ಸಿ ಬಿ ಪಡೆ ಯಾವುದೇ ಎಡವಟ್ಟು ಮಾಡದೆ ಪಂದ್ಯವನ್ನು ಗೆದ್ದುಕೊಂಡು  ಟ್ರೋಫಿಗೆ ಮುತ್ತಿಕ್ಕಿ 16 ವರ್ಷಗಳ ಕನಸನ್ನು ನನಸಾಗಿಸಿತು. ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಕ್ರಿಪ್ಟ್ ಇತಿಹಾಸ, ಅದ್ಭುತ ಶೈಲಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ! 
ಕನಸು ಈಡೇರಿದೆ. 16 ವರ್ಷಗಳ ಟ್ರೋಫಿ ಬರ ನೀಗಿಸಿದ ಆರ್‌ಸಿಬಿ ಗರ್ಲ್ಸ್ ತಂಡಕ್ಕೆ ಅಭಿನಂದನೆಗಳು.ಬೆನ್ನು ತಟ್ಟಲೇಬೇಕು: ಕಂಗ್ರಾಜುಲೇಷನ್ಸ್ ಹೇಳಲೇಬೇಕು  ಆರ್‌ಸಿಬಿ ಸಿಂಹಿಣಿಯರಿಗೆ…ನಮ್ಮ ಆರ್‌ಸಿಬಿಯ ಆಪತ್ಬಾಂಧವಿ ಎಲ್ಲಿಸ್ ಪೆರ್ರಿ ಮತ್ತು ಕನ್ನಡತಿ ಶ್ರೇಯಾಂಕಾ ಪಾಟೀಲ್  ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಒಡತಿಯರಾದರು. WPL-T20 ಫೈನಲ್‌ನಲ್ಲಿ ಜಯಗಳಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಟ್ರೋಫಿಯೊಂದಿಗೆ ಸಂಭ್ರಮಿಸಿದರು!  ತಮ್ಮ ತಂಡವು ಜಯ ಸಾಧಿಸುತ್ತಿದ್ದಂತೆ RCB ಅಭಿಮಾನಿಗಳು ಸಂತೋಷದ ಸಂಭ್ರಮದಲ್ಲಿದ್ದಾರೆ! 
ಆರ್‌ಸಿಬಿ ಅಭಿಮಾನಿಗಳು ಪದೇ ಪದೇ ಹೇಳುವ ‘ಈ ಸಲ ಕಪ್‌ ನಮ್ದೇ’ ಎಂಬ ಘೋಷ ವಾಕ್ಯವನ್ನು ಸ್ಮೃತಿ ಮಂಧಾನ ‘ಈ ಸಲ ಕಪ್‌ ನಮ್ದು’ ಎಂದು ಬದಲಿಸಿದರು.
ಹೆಣ್ಮಕ್ಕಳೇ ಸ್ಟ್ರಾಂಗ್ ಗುರು… 
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 + two =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you