ಕ್ರಿಕೆಟ್ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

-

- Advertisment -spot_img

 

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ ರಂಗನಪಲ್ಕೆ ಇವರ ಸಹಭಾಗಿತ್ವದಲ್ಲಿ, ಗಣೇಶ್ ಮಟ್ಟು (ಮಟ್ಟು ಅಸೋಸಿಯೇಟ್ಸ್) ಅವರ ಸಹಕಾರದೊಂದಿಗೆ, ಕೌಡೂರು ಸ್ಟೇಡಿಯಂ, ಗ್ಲಾರಿಡ ಎಸ್ಟೇಟ್ ರಂಗನಪಲ್ಕೆ ಇದರ ಸುಂದರ ಮೈದಾನದಲ್ಲಿ 15 ವರ್ಷ ವಯೋಮಿತಿಯ “ಅಕ್ಷಯ ಟಿ-20 ಕಪ್ – 2026” ಪಂದ್ಯಾವಳಿಗೆ ಭವ್ಯ ಚಾಲನೆ ದೊರೆಯಿತು.

ಉಡುಪಿ ಜಿಲ್ಲೆಯ ಪ್ರಮುಖ 6 ತಂಡಗಳು ಭಾಗವಹಿಸುತ್ತಿರುವ ಈ ಕೂಟದಲ್ಲಿ, ಇಂದು ನಡೆದ ‘A’ ಗುಂಪಿನ ಅರ್ಹತಾ ಸುತ್ತಿನಲ್ಲಿ ಅಕ್ಷಯ ಕ್ರಿಕೆಟ್ ಅಕಾಡೆಮಿ ಹಾಗೂ ಕೆ.ಆರ್.ಎಸ್ ಕಟಪಾಡಿ ತಂಡಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಸೆಮಿ ಫೈನಲ್‌ಗೆ ಅರ್ಹತೆ ಪಡೆದಿವೆ.

ನಾಳೆ (02/05/2026) ‘B’ ಗುಂಪಿನ ಪಂದ್ಯಗಳಲ್ಲಿ ಎಚ್‌ಜೆಸಿ ಕ್ರಿಕೆಟ್ ಅಕಾಡೆಮಿ ಶಿರ್ವ, ಬಾ.ಕಾ. ಬ್ರಹ್ಮಾವರ ಹಾಗೂ ಅಕ್ಷಯ ‘B’ ತಂಡಗಳು ಸೆಣಸಲಿವೆ.

ಬಾನುವಾರ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.

ಇಂದಿನ ಉದ್ಘಾಟನಾ ಸಮಾರಂಭದಲ್ಲಿ ಸಂಯೋಜಕರೂ ಹಿರಿಯ ತರಬೇತುದಾರರಾದ ಸದಾನಂದ ಶಿರ್ವ, ದಯಾನಂದ ಬಂಗೇರ, ಉದಯ ಕಟಪಾಡಿ, ಉಡುಪಿಯ ಖ್ಯಾತ ವಕೀಲರಾದ ಗಣೇಶ್ ಮಟ್ಟು, ಯುಡಿಸಿಎ ಕಾರ್ಯದರ್ಶಿ ರೆನ್ ಟ್ರೇವೊರ್ ಡಯಾಸ್ ಹಾಗೂ ಇನ್ನಿತರ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

LEAVE A REPLY

Please enter your comment!
Please enter your name here

5 + eleven =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you