ಉತ್ತಮ ಬೌಲಿಂಗ್ ಆ್ಯಾಕ್ಷನ್ ಮತ್ತು ಸುಮಾರು 145 kmph ಗಿಂತ ಹೆಚ್ಚಿನ ವೇಗದಲ್ಲಿ ಸ್ಥಿರವಾಗಿ ಬೌಲಿಂಗ್ ಮಾಡುವ ಕರ್ನಾಟಕದ ವೇಗದ ಬೌಲರ್ ಮುರಳಿಕೃಷ್ಣ ಪ್ರಸಿದ್ಧ್ ಕೃಷ್ಣ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಏಷ್ಯಾಕಪ್‌ಗಾಗಿ ಪ್ರಕಟಿಸಲಾದ ತಂಡದಲ್ಲಿ ಹೆಸರಿಸಲಾದ ಐವರು ವೇಗದ ಬೌಲರ್‌ಗಳಲ್ಲಿ ಪ್ರಸಿದ್ಧ ಕೃಷ್ಣ ಒಬ್ಬರಾಗಿದ್ದು, ಈ ಮೂಲಕ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯನ್ನು ಹೆಚ್ಚಿಸಿದ್ದಾರೆ.
ಪ್ರಸಿದ್ಧ್ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಎಸೆತದಲ್ಲೇ ಒಂದು ವಿಕೆಟ್ ಪಡೆದು ಎಲ್ಲರ ಗಮನ ಸೆಳೆದಿದ್ದರು. ಗಾಯದಿಂದ ಚೇತರಿಸಿಕೊಂಡು ಅದ್ಭುತ ಪ್ರದರ್ಶನ ನೀಡುವ ಮೂಲಕ ತಿರುಗೇಟು ನೀಡಿದ ಕನ್ನಡಿಗ ಯುವ ವೇಗಿ ಇದೀಗ ಏಷ್ಯಾಕಪ್ ಸರಣಿಗೆ ಆಯ್ಕೆಯಾಗುವ ಮೂಲಕ ದೊಡ್ಡ ವೇದಿಕೆಯಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವೇಗಿಗಳಿಗೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಪ್ರಸಿದ್ಧ್ ಕೃಷ್ಣ ಹೊಂದಿದ್ದು ಅವರನ್ನು ಎದುರಿಸಲು ಬ್ಯಾಟ್ಸ್‌ಮನ್‌ಗಳಿಗೆ ಕಷ್ಟವಾಗುವುದರಲ್ಲಿ ಸಂದೇಹವಿಲ್ಲ.
ಐರ್ಲೆಂಡ್ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಪ್ರಸಿದ್ಧ್ ಕೃಷ್ಣ ಕೂಡ ಗಾಯದ ಸಮಸ್ಯೆಯಿಂದ ದೂರ ಉಳಿದಿದ್ದರು. ಆದರೆ ಇದೀಗ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಭಾರತ ತಂಡಕ್ಕೆ ಹಳೆಯ ಚೈತನ್ಯ ಮತ್ತು ಉತ್ಸಾಹದಿಂದ ಮರಳಿ ಕಮ್ ಬ್ಯಾಕ್ ಮಾಡಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ 20 ಸರಣಿಯ ಮೊದಲ ಪಂದ್ಯವು ಚುಟುಕು ಮಾದರಿಯಲ್ಲಿ ಎರಡು ವಿಕೆಟ್ ಪಡೆದ ಕೃಷ್ಣ ಅವರಿಗೆ ಚೊಚ್ಚಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು ಎರಡು ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ ಕೂಡ ಎರಡು ವಿಕೆಟ್ ಕಬಳಿಸುವ ಮೂಲಕ ಭರ್ಜರಿ ಪುನರಾಗಮನ ಮಾಡಿದರು.
ಏಷ್ಯಾಕಪ್‌ಗೆ ಆಯ್ಕೆಯಾಗಿರುವ ತಂಡದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಇಬ್ಬರು ಆಟಗಾರರಲ್ಲಿ ಕೈಷ್ನಾ ಒಬ್ಬರು. ಕನ್ನಡಿಗ ವೇಗಿ ಪ್ರಸಿದ್ಧ್ ಅವರನ್ನು ನೋಡಿದಾಗ ಇವರು ಖಂಡಿತಾ ಪ್ರಸಿದ್ಧ ಆಟಗಾರನಾಗುತ್ತಾರೆ ಎನ್ನುವ ಭರವಸೆ ಮೂಡಿದೆ.