SportsKannada | ಸ್ಪೋರ್ಟ್ಸ್ ಕನ್ನಡ

ಇನ್ನಿಂಗ್ಸ್ ಸೋಲಿನತ್ತ ಬಾಂಗ್ಲಾದೇಶ

ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಐತಿಹಾಸಿಕ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ನೆರವಿನಿಂದ ಟೀಮ್ ಇಂಡಿಯಾ 89.4 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 347 ರನ್ ಪೇರಿಸಿ ಡಿಕ್ಲೇರ್ ಘೋಷಿಸಿದೆ.

ಬಾಂಗ್ಲಾದೇಶ ಪ್ರಥಮ ಇನ್ನಿಂಗ್ಸ್ ನಲ್ಲಿ 106 ರನ್ ಗಳಿಗೆ ಸರ್ವಪತನ ಕಂಡಿತ್ತು ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 241 ರನ್ ಅಂತರದ ಬೃಹತ್ ಮುನ್ನಡೆಯತ್ತ ಭಾರತ ದಾಪುಗಲಿ ಇಟ್ಟಿದೆ. ಬಳಿಕ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪ್ರವಾಸಿ ಬಾಂಗ್ಲಾದೇಶ ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಎರಡನೇ ದಿನದಂತ್ಯಕ್ಕೆ 32.3 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿದೆ. ದ್ವಿತೀಯ ಇನ್ನಿಂಗ್ಸ್ ನಲ್ಲಿ ಮುಷ್ಫಿಕರ್ ರಹೀಂ ಅರ್ಧಶತಕದ ದಾಖಲಿಸಿಕೊಂಡು ಕ್ರೀಸ್ ನಲ್ಲಿ ಸುರಕ್ಷಿತವಾಗಿದ್ದಾರೆ. ಬಾಂಗ್ಲಾದೇಶ ತಂಡ ಇನ್ನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಇನ್ನೂ 89 ರನ್ ಗಳಿಸಬೇಕಾಗಿದೆ. ಇಂದೂ ಕೂಡ ಭಾರತದ ವೇಗಿಗಳು ಉತ್ತಮ ದಾಳಿ ಸಂಘಟಿಸಿದ್ದು ಇಶಾಂತ್ 4 ಮತ್ತು ಉಮೇಶ್ ಯಾದವ್ 3 ವಿಕೆಟ್ ಕಬಳಿಸಿದ್ದಾರೆ.

ಕೊಹ್ಲಿ ಖಾತೆಗೆ 27 ನೇ ಶತಕ:
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 27ನೇ ಶತಕ ಸಾಧನೆ ಮಾಡಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊಟ್ಟ ಮೊದಲ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 27 ನೇ ಶತಕ ತಮ್ಮ ಖಾತೆಯಲ್ಲಿ ದಾಖಲಿಸಿ ಕೊಂಡಿದ್ದಾರೆ.
ಇದರ ಜೊತೆಗೆ ಪಿಂಕ್ ಬಾಲ್ ನಲ್ಲ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಪ್ರೀತಮ್ ಹೆಬ್ಬಾರ್.

Exit mobile version