Site icon SportsKannada ಸ್ಪೋರ್ಟ್ಸ್ ಕನ್ನಡ

ಉಡುಪಿ: ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಗೆ ಬೆಳಪು ಸ್ಪೋರ್ಟ್ಸ್ ಕ್ಲಬ್ ಆಯ್ಕೆ

ಉಡುಪಿ: ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಗೆ ಬೆಳಪು ಸ್ಪೋರ್ಟ್ಸ್ ಕ್ಲಬ್ ಆಯ್ಕೆ

ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ನೀಡಿರುವ ಬೆಳಪು ಸ್ಪೋರ್ಟ್ಸ್ ಕ್ಲಬ್ ಈ ವರ್ಷದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸ್ಥಳೀಯ ಯುವಕರಲ್ಲಿ ಕ್ರೀಡಾ ಮನೋಭಾವ ಬೆಳೆಸುವಲ್ಲಿ, ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುವಲ್ಲಿ ಮತ್ತು ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ರಾಜ್ಯ ಮಟ್ಟಕ್ಕೆ ತಲುಪಿಸುವಲ್ಲಿ ಈ ಕ್ಲಬ್ ಪ್ರಮುಖ ಪಾತ್ರ ವಹಿಸಿದೆ.

ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ಈ ಗೌರವ ಬೆಳಪು ಸ್ಪೋರ್ಟ್ಸ್ ಕ್ಲಬ್ ನ ಸಾಧನೆಗೆ ಮತ್ತೊಂದು ಕಿರೀಟವಾಗಿ ಪರಿಣಮಿಸಿದೆ.

ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಕ್ಲಬ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ

Exit mobile version