ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ “ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ
ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿಮಿಟೆಡ್ ಸಂಸ್ಥೆಯನ್ನು ಸ್ಥಾಪಿಸಿ,ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗವನ್ನು ಕಲ್ಪಿಸಿ ನಿರುದ್ಯೋಗಿಗಳನ್ನು ಸ್ವಾವಲಂಬಿ ಜೀವನಕ್ಕೆ ಮುನ್ನುಗ್ಗಿಸಿ,ಹಲವಾರು ಪ್ರತಿಭೆಗಳಿಗೂ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಒಡೆತನದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ಇವರ ವತಿಯಿಂದ ಈಗಾಗಲೇ 7 ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟಿದ್ದು,ಇದೀಗ 8 ನೇ ಮನೆಯ ಪ್ರವೇಶೋತ್ಸವ ಕಾರ್ಯಕ್ರಮ ನಾಳೆ 26 ರವಿವಾರ ಮಧ್ಯಾಹ್ನ 3.30 ಗಂಟೆಗೆ ಉಪ್ಪುಂದ ಶಾಲೆಬಾಗಿಲು ಬಳಿ ನೆರವೇರಲಿದೆ.
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಬಿ.ಅಪ್ಪಣ್ಣ ಹೆಗ್ಡೆ ಮತ್ತು ಆರ್.ಎಸ್.ಎಸ್ ಉಡುಪಿ ಜಿಲ್ಲಾ ಸಂಘಚಾಲಕರಾದ ಡಾ.ನಾರಾಯಣ ಶೆಣೈ ತಮ್ಮ ಅಮೃತ ಹಸ್ತದಿಂದ ನೂತನ ಗೃಹದ ಉದ್ಘಾಟನೆ ನಡೆಸಲಿದ್ದಾರೆ.
ವಿಶೇಷವಾಗಿ ನಾಳೆ ರವಿವಾರ ಸೇವಾರತ್ನ ಡಾ.ಗೋವಿಂದಬಾಬು ಪೂಜಾರಿಯವರ ಜನ್ಮದಿನವಾಗಿದ್ದು,ಈ ದಿನವನ್ನು 8 ನೇ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾಗಿದ್ದಾರೆ.