Categories
ಕ್ರಿಕೆಟ್

ಬೈಂದೂರು-ಸೇನೇಶ್ವರ ಟ್ರೋಫಿ:2022-ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆಟಗಾರರಿಗಾಗಿ

ಶ್ರೀ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ(ರಿ)ಬೈಂದೂರು ಇವರ ಆಶ್ರಯದಲ್ಲಿ,ಫೆಬ್ರವರಿ 12 ಮತ್ತು 13 ರಂದು ಬೈಂದೂರಿನ ಗಾಂಧಿ ಮೈದಾನದಲ್ಲಿ ಸೇನೇಶ್ವರ ಟ್ರೋಫಿ-2022 ಪಂದ್ಯಾವಳಿ ಆಯೋಜಿಸಲಾಗಿದೆ.
60 ಗಜಗಳ ಮಾದರಿಯಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
12 ಶನಿವಾರ ಬೆಳಿಗ್ಗೆ 8.30 ಗೆ ಸರಿಯಾಗಿ ಶೆಫ್ ಟಾಕ್ ಫುಡ್& ಹಾಸ್ಪಿಟಾಲಿಟಿ ಸರ್ವಿಸ್ ಪ್ರೈಲಿ ಇದರ ಆಡಳಿತ ನಿರ್ದೇಶಕರು,ಸಮಾಜರತ್ನ ಡಾ.ಶ್ರೀ.ಗೋವಿಂದ ಬಾಬು ಪೂಜಾರಿಯವರು ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.ಸಭಾಧ್ಯಕ್ಷರಾಗಿ ಬೈಂದೂರಿನ ಮಾಜಿ ಶಾಸಕರು ಶ್ರೀ.ಕೆ‌.ಗೋಪಾಲ ಪೂಜಾರಿ ಮತ್ತು ಇನ್ನಿತರ ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
13 ರವಿವಾರ ಸಂಜೆ 8 ಗಂಟೆಗೆ ಸರಿಯಾಗಿ ಸಮಾರೋಪ ಸಮಾರಂಭ ನಡೆಯಲಿದ್ದು ಸಭಾಧ್ಯಕ್ಷರಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ.ಬಿ.ಎಮ್.
ಸುಕುಮಾರ್ ಶೆಟ್ಟಿ,ಮುಖ್ಯ ಅತಿಥಿಗಳಾಗಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ  ಶ್ರೀ.ಸುನಿಲ್ ನಾಯ್ಕ್ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

17 + 4 =