ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಇವರ ಆಶ್ರಯದಲ್ಲಿ,ಕ್ರೀಡಾ ಸಂಘಟಕ ಕಿರಣ್ ಬೈಂದೂರು ಇವರ ದಕ್ಷ ಸಾರಥ್ಯದಲ್ಲಿ ಸತತ 4 ನೇ ಬಾರಿಗೆ ರಾಜ್ಯಮಟ್ಟದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಜನವರಿ 13 ಮತ್ತು 14 ರಂದು ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾಟದ ಪ್ರಥಮ ಬಹುಮಾನ 1,00,006 ರೂ,ದ್ವಿತೀಯ 50,006 ರೂ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕ ಒಳಗೊಂಡಿರುತ್ತದೆ ಹಾಗೂ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡುವ ಆಟಗಾರರಿಗೆ ಆಕರ್ಷಕ ಉಡುಗೊರೆಗಳನ್ನು ನೀಡಲಾಗುತ್ತಿದೆ ಎಂದು ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಅಧ್ಯಕ್ಷ ಕಿರಣ್ ಬೈಂದೂರು ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
M ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದ್ದು,ಭಾಗವಹಿಸಲು ಆಸಕ್ತ ತಂಡಗಳು 7829915202,7975324310, 9916440337 ಈ ನಂಬರ್ ಗಳನ್ನು ಸಂಪರ್ಕಿಸಬಹುದು…