ಶುಕ್ರವಾರ ಕನ್ನಡಿಗರಿಗೆ ಡಬಲ್ ಖುಷಿ, ಒಂದು ಕಡೆ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆಯಿಟ್ಟಿದೆ.
ಮತ್ತೊಂದೆಡೆ ಸೆಲಿಬ್ರಿಟಿ ಕ್ರಿಕೆಟ್ ಲೀಗ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ತಲುಪಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಶುಕ್ರವಾರ ಬೆಂಗಾಲ್ ಟೈಗರ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಸ್ಯಾಂಡಲ್ ವುಡ್ ತಂಡ ಇದೀಗ ಫಿನಾಲೆಯಲ್ಲಿ ಸ್ಥಾನ ಪಡೆದಿದೆ.
ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಬೆಂಗಾಲ್ ಟೈಗರ್ಸ್ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಬೆಂಗಾಲ್ ಟೈಗರ್ಸ್ ತಂಡದ ವಿರುದ್ಧ ಗೆಲ್ಲುವುದರ ಮೂಲಕ ಅಂತಿಮ ಸುತ್ತಿಗೆ ಸಜ್ಜಾಗಿದೆ.ಸಿಸಿಎಲ್ 2024ರಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಕರ್ನಾಟಕ ಬುಲ್ಡೋಜರ್ಸ್ ತಂಡ 3ನೇ ಬಾರಿ ಟ್ರೋಫಿ ಎತ್ತಿ ಹಿಡಿಯುವ ಹುಮ್ಮಸ್ಸಿನಲ್ಲಿದೆ.
ಕರ್ನಾಟಕ ಬುಲ್ಡೋಜರ್ಸ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲುವು ಸಾಧಿಸಿ, ಮಾರ್ಚ್ 17 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ನೇರವಾಗಿ ಪ್ರವೇಶಿಸಿದೆ. 2013 ಹಾಗೂ 2014ರಲ್ಲಿ ಎರಡು ಬಾರಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಟ್ರೋಫಿಗೆ ಮುತ್ತಿಟ್ಟಿತ್ತು. ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಸುದೀಪ್ ಕ್ಯಾಪ್ಟನ್ ಆಗಿ ತಂಡ ಮುನ್ನಡೆಸುತ್ತಿದ್ದಾರೆ. ನಟರಾದ ಪ್ರದೀಪ್, ಡಾರ್ಲಿಂಗ್ ಕೃಷ್ಣ, ಜೆಕೆ, ರಾಜೀವ್, ಪ್ರತಾಪ್, ಕರಣ್, ಪೆಟ್ರೋಲ್ ಪ್ರಸನ್ನ, ಮಂಜುನಾಥ್, ಚಂದನ್, ಸುನೀಲ್ ರಾವ್ ತಂಡದಲ್ಲಿದ್ದಾರೆ. ಅಂತಿಮ ಹಣಾಹಣಿಗೆ ಕರ್ನಾಟಕ ಬುಲ್ಡೋಜರ್ಸ್ ತಂಡ ಪ್ರವೇಶಿಸಿದ್ದಕ್ಕೆ ಚಿಯರ್‌ಅಪ್ ಮಾಡೋಣ.