
ಗಂಗೊಳ್ಳಿಯಲ್ಲಿ “ಚಾರೋಡಿ ಮೇಸ್ತ ಟ್ರೋಫಿ–2026” ಕ್ರಿಕೆಟ್ ಹಬ್ಬ
ಬೆಣಗೆರೆ ಗುಜ್ಜಾಡಿಯ ಶ್ರೀ ಸುಬ್ರಹ್ಮಣ್ಯೇಶ್ವರ ಯೂತ್ ಕ್ಲಬ್‌ನ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಲೈಟ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ “ಚಾರೋಡಿ ಮೇಸ್ತ ಟ್ರೋಫಿ–2026” ಅನ್ನು ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಟೂರ್ನಮೆಂಟ್ ಜನವರಿ 17 ಮತ್ತು 18, 2026ರಂದು ಗಂಗೊಳ್ಳಿಯ ಎಸ್.ವಿ. ಕಾಲೇಜು ಮೈದಾನದಲ್ಲಿ ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಾನ್ವಿತ ತಂಡಗಳು ಭಾಗವಹಿಸುವ ನಿರೀಕ್ಷೆಯಿರುವ ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ.50,005 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಪ್ರದಾನ ಮಾಡಲಾಗುತ್ತದೆ. ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ.30,003 ನಗದು ಬಹುಮಾನ ನೀಡಲಾಗುತ್ತದೆ.
ಒಟ್ಟು 6 ಓವರ್‌ಗಳ ಪಂದ್ಯಗಳೊಂದಿಗೆ ನಡೆಯುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸುವ ತಂಡಗಳು ಜನವರಿ 12, 2026ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ
ಪ್ರಜ್ವಲ್ – 7760005871,
ರಾಜೇಶ್ – 9611253077,
ಪ್ರದೀಪ್ – 9901958544
ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಈ ಟೂರ್ನಮೆಂಟ್‌ನ ನೇರಪ್ರಸಾರವನ್ನು ಸ್ಪೋರ್ಟ್ಸ್ ಕನ್ನಡ ಲೈವ್ ಮೀಡಿಯಾ ಬಿತ್ತರಿಸಲಿದೆ.
