ಫುಟ್ಬಾಲ್ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

-

- Advertisment -spot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ ಮಣಿಪಾಲದಲ್ಲಿ ಜರುಗಿತು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಗಫೂರ್ ಮಾತನಾಡಿ “ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, ಮಣಿಪಾಲದಲ್ಲಿ ಈ ಪಂದ್ಯಾಟ ಸಂಘಟಿಸಿ ಫುಟ್ಬಾಲ್ ಕ್ರೀಡಾಪಟುಗಳಿಗೆ ಉತ್ತಮ‌ ಅವಕಾಶ ಸೃಷ್ಟಿಸಿದೆ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಯವರ ಮನವಿಯ ಮೇರೆಗೆ ಉಡುಪಿಯಲ್ಲಿ ಫುಟ್ಬಾಲ್ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಿಸಲಿದ್ದೇವೆ ಎಂದರು.

ಮುಖ್ಯ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ “ಜಗತ್ತಿನ ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯ ಕ್ರೀಡೆ ಫುಟ್ಬಾಲ್.200 ರಾಷ್ಟ್ರಗಳು ಪುಟ್ಬಾಲ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು,ಈ ಆಟಕ್ಕೆ ಕೋಟ್ಯಾಂತರ ಮಂದಿ ಹಿಂಬಾಲಕರಿದ್ದಾರೆ.ಉಡುಪಿ ಜಿಲ್ಲೆ ಧಾರ್ಮಿಕ,ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮನ್ನಣೆ ಪಡೆದ ಹಾಗೆ ಫುಟ್ಬಾಲ್ ಕ್ರೀಡೆಯಲ್ಲೂ ಪ್ರಮುಖವಾಗಿ ಗುರುತಿಸುವಂತಾಗಬೇಕೆನ್ನುವ ಉದ್ದೇಶದಿಂದ ಶಿವಾಸ್ ಕಪ್ ಆಯೋಜಿಸಲಾಗಿದೆ ಎಂದರು.

ಈ ಸಂದರ್ಭ ಅಲೆವೂರು ಗ್ರಾಮಪಂಚಾಯತ್ ಅಧ್ಯಕ್ಷ ಹರೀಶ್ ಕಿಣಿ,ಸದಾನಂದ್ ಕಾಂಚನ್,ಜಯವೀರ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

five × 5 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you