ಉಡುಪಿ : ಇತ್ತೀಚೆಗೆ ತಮಿಳುನಾಡಿನ ಚೆನ್ನೈಯ ನೆಹರೂ ಕ್ರೀಡಾಂಗಣದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಸ್ಟೇಟ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಧನ್ಯ ಆಚಾರ್ಯ ಮಹಿಳೆಯರ ಜೂನಿಯರ್ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿಯ ಪದಕವನ್ನು ಜಯಿಸಿರುತ್ತಾರೆ.
ಉಡುಪಿ ಜಿಲ್ಲಾ ಅಮೆಚುರ್ ಬಾಕ್ಸಿಂಗ್‍ನ ಬಾಕ್ಸರ್ ಆಗಿದ್ದು, ಅಲೆವೂರಿನ ಸುಭೋದಿನಿ ಶಾಲೆಯಲ್ಲಿ ಶಿವಪ್ರಸಾದ್ ಆಚಾರ್ಯರಲ್ಲಿ ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.