20.6 C
London
Friday, May 17, 2024
Homeಕ್ರಿಕೆಟ್ಟಿ20 ಸರಣಿಗೆ ಧವನ್‌ ಅಲಭ್ಯ, ಏಕದಿನ ತಂಡಕ್ಕೆ ಪೃಥ್ವಿ ಶಾ ಆಯ್ಕೆ

ಟಿ20 ಸರಣಿಗೆ ಧವನ್‌ ಅಲಭ್ಯ, ಏಕದಿನ ತಂಡಕ್ಕೆ ಪೃಥ್ವಿ ಶಾ ಆಯ್ಕೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಮತ್ತು ವೇಗದ ಬೌಲರ್ ಇಶಾಂತ್ ಶರ್ಮಾ ಅವರು ಕ್ರಮವಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಮತ್ತು ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಟಿ–20 ತಂಡಕ್ಕೆ ಸಂಜು ಸ್ಯಾಮ್ಸನ್‌, ಏಕದಿನ ತಂಡಕ್ಕೆ ಪೃಥ್ವಿ ಶಾ ಆಯ್ಕೆಯಾಗಿದ್ದಾರೆ.

ಹೋದ ಭಾನುವಾರ ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶಿಖರ್ ಧವನ್ ಭುಜಕ್ಕೆ ಗಾಯವಾಗಿತ್ತು.  ಆದ್ದರಿಂದ ಇದೇ ಶುಕ್ರವಾರ ನಡೆಯಲಿರುವ ಕಿವೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಆಡುವ ತಂಡದಲ್ಲಿ ಅವರಿಗೆ ಸ್ಥಾನ ನೀಡಿಲ್ಲ.ಸೋಮವಾರ ನಡೆದ ರಣಜಿ ಟ್ರೋಫಿ ಟೂರ್ನಿ ಪಂದ್ಯದಲ್ಲಿ ಇಶಾಂತ್ ಶರ್ಮಾ ಪಾದಕ್ಕೆ ಪೆಟ್ಟಾಗಿತ್ತು. ಅವರಿಗೆ ದೀರ್ಘ ಅವಧಿಯ ವಿಶ್ರಾಂತಿ ನೀಡಲಿರುವ ಕಾರಣ ಟೆಸ್ಟ್ ಸರಣಿಯಲ್ಲಿ ಆಡುತ್ತಿಲ್ಲ.

‘ಇಶಾಂತ್ ಅವರ ಪಾದದ  ಎಂ.ಆರ್.ಐ ಮಾಡಲಾಗಿದೆ. ಅದರಲ್ಲಿ ಗ್ರೇಡ್ –3 ಗಾಯವಾಗಿದೆ ಮತ್ತು ಅದು ಗಂಭೀರವಾಗಿದೆ. ಅವರಿಗೆ ಆರು ವಾರಗಳ ವಿಶ್ರಾಂತಿ ಮತ್ತು ಚಿಕಿತ್ಸೆಯ ಅಗತ್ಯವಿದೆ. ಅವರ ಅನುಪಸ್ಥಿತಿಯು ನಮ್ಮ ತಂಡಕ್ಕೆ ಕಾಡಲಿದೆ’ ಎಂದು ಡಿಡಿಸಿಎ ಪ್ರಧಾನ ಕಾರ್ಯದರ್ಶಿ ವಿನೋದ್ ತಿಹಾರ ತಿಳಿಸಿದ್ದಾರೆ.

ಭಾರತ ತಂಡವು ನ್ಯೂಜಿಲೆಂಡ್‌ನಲ್ಲಿ ಐದು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 − 5 =