ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಚೆಫ್ ಟಾಕ್ ಪುಢ್&ಹಾಸ್ಪಿಟಾಲಿಟಿ ಪ್ರೈ ಲಿ ನ ಮಾಲೀಕರು ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ)ನ ಮೂಲಕ ಸಮಾಜದ ಬಡ ಅಶಕ್ತ ಕುಟುಂಬಗಳಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟು,ಶೈಕ್ಷಣೀಯ,ವೈದ್ಯಕೀಯ ನೆರವು ನೀಡುತ್ತಿರುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಬೈಂದೂರು ಇವರನ್ನು ಚಾಲೆಂಜ್ ಕ್ರಿಕೆಟ್ ಕ್ಲಬ್ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಗೋವಿಂದ ಬಾಬು ಪೂಜಾರಿಯವರು “ಯುವಕರು ಸಮಾಜದ ಆಸ್ತಿ.ಕ್ರೀಡಾ ಸ್ಪೂರ್ತಿ ಯಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು.ಜೊತೆಯಲ್ಲಿ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು” ಎಂದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜ್ಯ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಯಶಪಾಲ್ ಸುವರ್ಣ,ನ್ಯೂ ಮೆಡಿಕಲ್ ಸೆಂಟರ್ ಡಾ.ರಂಜನ್, ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್,ಜಪ್ತಿ ಪ್ರಥಮ್ ಇನ್ ರೆಸಾರ್ಟ್ ಮರತ್ತೂರು ಸುರೇಶ್ ಶೆಟ್ಟಿ,ಸಿವಿಲ್ ಕಂಟ್ರಾಕ್ಟರ್ ಸಚಿತ್ ಪೈ,ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೃಷ್ಣೇ ಗೌಡ್ರು,ಸಹನಾ ಗ್ರೂಪ್ಸ್ ನ ಸುರೇಂದ್ರ ಶೆಟ್ಟಿ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್,ಚಾಲೆಂಜ್ ಚಂದ್ರ,ಪಂದ್ಯಾಟ ಸಮಿತಿಯ ಪದಾಧಿಕಾರಿಗಳು,ತಂಡದ ಸದಸ್ಯರು ಉಪಸ್ಥಿತರಿದ್ದರು .