ಕೋಟ-ಡಾ.ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ ಮತ್ತು ಕ್ರೀಡಾಸಂಘಟಕರಾದ ಕೀರ್ತೀಶ್ ಪೂಜಾರಿ ಇವರ ಸಾರಥ್ಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಟ್ರೋಫಿ-2023 ಹೊನಲು ಬೆಳಕಿನ 40 ಗಜಗಳ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ.
ಕೋಟ ಶಾಂಭವಿ ಶಾಲೆ ಮೈದಾನದಲ್ಲಿ ಮಾರ್ಚ್ 25 ಮತ್ತು 26 ರಂದು ಅದ್ಧೂರಿಯಾಗಿ ನಡೆಯಲಿರುವ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿದೆ.
ಪಂದ್ಯಾಟದ ಪ್ರಥಮ ಪ್ರಶಸ್ತಿ 1,50,000 ರೂ,ದ್ವಿತೀಯ ಪ್ರಶಸ್ತಿ 1,00,000 ರೂ ನಗದು ಬಹುಮಾನದ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರಿಗೆ ವಿಶೇಷ ಬಹುಮಾನ ಹಾಗೂ ಪಂದ್ಯಾಟದ ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಮತ್ತು ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾಗುವ ಆಟಗಾರರು ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಬಿತ್ತರಗೊಳ್ಳಲಿದೆ.ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.