ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಟಿ.ಸಿ.ಎ ಉಡುಪಿ ಆಶ್ರಯದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ ಸತತ ಐದು ದಿನಗಳಿಂದ ನಡೆಯುತ್ತಿದೆ.
ಅಂತಿಮ ದಿನವಾದ ಶುಕ್ರವಾರದಂದು 2023 ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರಿಕೆಟ್ ಪಟು ಪೃಥ್ವಿರಾಜ್ ಶೆಟ್ಟಿ ಹುಂಚನಿ,14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಚಿತಾ ಹತ್ವಾರ್ ಮತ್ತು ಪ್ರಾಚಿ,17 ಮತ್ತು 14 ರ ವಯೋಮಾನ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚಾರಿತ್ರ್ಯ ಮತ್ತು ತ್ರಿಶಾ.ಐ.ನಾಯಕ್ ಇವರನ್ನು ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಟಿ.ಸಿ.ಎ ಅಧ್ಯಕ್ಷ ಗೌತಮ್ ಶೆಟ್ಟಿ ಸ್ಪೋರ್ಟ್ಸ್ ಕನ್ನಡ ಪ್ರಕಟಣೆಯನಲ್ಲಿ ತಿಳಿಸಿದ್ದಾರೆ.