Home ಕ್ರಿಕೆಟ್ ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ನಿಧನರಾದರು.

1983ರಿಂದ 1989ರವರೆಗೆ ರೈಲ್ವೇಸ್ ತಂಡವನ್ನು ಪ್ರತಿನಿಧಿಸಿದ್ದ ಪ್ರಕಾಶ್ ಕರ್ಕೇರಾ ಅವರು ಬಲಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು. ತಮ್ಮ ಕ್ರಿಕೆಟ್ ಜೀವನದಲ್ಲಿ ಅವರು ಒಟ್ಟು 27 ಪಂದ್ಯಗಳಲ್ಲಿ (49 ಇನ್ನಿಂಗ್ಸ್) ಭಾಗವಹಿಸಿ 1,446 ರನ್ ಗಳಿಸಿದ್ದರು. 110 ಅವರ ಗರಿಷ್ಠ ಸ್ಕೋರ್ ಆಗಿದ್ದು, 31.43 ಸರಾಸರಿಯನ್ನು ಕಾಯ್ದುಕೊಂಡಿದ್ದರು. ಅವರ ಕ್ರೀಡಾ ಸಾಧನೆಗಳು ಮತ್ತು ತಂಡಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿವೆ.

ಪ್ರಕಾಶ್ ಕರ್ಕೇರಾ ಅವರ ಅಗಲಿಕೆಯಿಂದ ಕ್ರೀಡಾಭಿಮಾನಿಗಳು ಮತ್ತು ಸ್ನೇಹಿತರು ಆಳವಾದ ಶೋಕ ವ್ಯಕ್ತಪಡಿಸಿದ್ದಾರೆ.

ಅವರ ಪವಿತ್ರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಸದ್ಗತಿ ಲಭಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಅವರ ಕುಟುಂಬದವರಿಗೆ ದೇವರು ಕರುಣಿಸಲಿ.

LEAVE A REPLY

Please enter your comment!
Please enter your name here

18 + seven =

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ನಿಧನರಾದರು.1983ರಿಂದ 1989ರವರೆಗೆ ರೈಲ್ವೇಸ್ ತಂಡವನ್ನು ಪ್ರತಿನಿಧಿಸಿದ್ದ ಪ್ರಕಾಶ್ ಕರ್ಕೇರಾ ಅವರು ಬಲಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು. ತಮ್ಮ ಕ್ರಿಕೆಟ್ ಜೀವನದಲ್ಲಿ ಅವರು ಒಟ್ಟು 27 ಪಂದ್ಯಗಳಲ್ಲಿ (49 ಇನ್ನಿಂಗ್ಸ್) ಭಾಗವಹಿಸಿ 1,446 ರನ್ ಗಳಿಸಿದ್ದರು. 110 ಅವರ ಗರಿಷ್ಠ ಸ್ಕೋರ್ ಆಗಿದ್ದು, 31.43 ಸರಾಸರಿಯನ್ನು ಕಾಯ್ದುಕೊಂಡಿದ್ದರು. ಅವರ ಕ್ರೀಡಾ ಸಾಧನೆಗಳು ಮತ್ತು ತಂಡಕ್ಕೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿವೆ.ಪ್ರಕಾಶ್ ಕರ್ಕೇರಾ ಅವರ ಅಗಲಿಕೆಯಿಂದ ಕ್ರೀಡಾಭಿಮಾನಿಗಳು ಮತ್ತು ಸ್ನೇಹಿತರು ಆಳವಾದ ಶೋಕ ವ್ಯಕ್ತಪಡಿಸಿದ್ದಾರೆ.ಅವರ ಪವಿತ್ರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಸದ್ಗತಿ ಲಭಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಅವರ ಕುಟುಂಬದವರಿಗೆ ದೇವರು ಕರುಣಿಸಲಿ.

Send this to a friend