SportsKannada | ಸ್ಪೋರ್ಟ್ಸ್ ಕನ್ನಡ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ಗುಜರಾತಿನ ವಡೋದರದಲ್ಲಿ ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಈಜು* ಸ್ಪರ್ಧೆಯಲ್ಲಿ ಕaರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರು
400ಮೀ ಫ್ರೀ ಸ್ಟೈಲ್‌ನಲ್ಲಿ ಚಿನ್ನದಪದಕ,200 ಮೀಟರ್ ಫ್ರೀ ಸ್ಟೈಲ್‌ನಲ್ಲಿ ‌ಬೆಳ್ಳಿಪದಕ, 100 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದಾರೆ.

2013ರಲ್ಲಿ ಕೈ ಕಾಲುಗಳಿಗೆ ಕೋಳದಿಂದ ಬಂಧಿಸಿಕೊಂಡು ಅರಬ್ಬಿ ಸಮುದ್ರದಲ್ಲಿ 3.71 ಕಿ.ಮೀ ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಇವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಇನ್ನಿತರ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ. ಕರ್ಣಾಟಕ ರಾಜ್ಯದ ಒಂಬತ್ತನೆಯ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಇವರ ಜೀವನ ಚರಿತ್ರೆಯ ಪಾಠವಿರುತ್ತದೆ.

Exit mobile version