ಶೆಫ್ ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಗೋವಿಂದ ಬಾಬು ಪೂಜಾರಿಯವರಿಗೆ ದೆಹಲಿಯ ಇಂಡಿಯನ್ ಅಚೀವರ್ಸ್ ಸಂಸ್ಥೆ ಕೊಡಮಾಡುವ “ವರ್ಷದ ಅತ್ಯುತ್ತಮ ಉದ್ಯಮಿ ಪ್ರಶಸ್ತಿ” ಲಭಿಸಿದೆ.ಆನ್ಲೈನ್ ಮೂಲಕ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶೆಫ್ ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸ್ ಪ್ರೈವೇಟ್ ಲಿಮಿಟೆಡ್, ಶೆಫ್ ಟಾಕ್ ನ್ಯೂಟ್ರಿಫುಡ್ ಪ್ರೈವೇಟ್ ಲಿಮಿಟೆಡ್,ಪ್ರಗ್ನ್ಯಾ ಸಾಗರ್ ಹೋಟೆಲ್ ಮತ್ತು ರೆಸಾರ್ಟ್ ಪ್ರೈವೇಟ್ ಲಿಮಿಟೆಡ್,ಮತ್ಸ್ಯಬಂಧನ ಪ್ರೈವೇಟ್ ಲಿಮಿಟೆಡ್,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ)ಉಪ್ಪುಂದ ಈ ಎಲ್ಲಾ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋವಿಂದ ಬಾಬು ಪೂಜಾರಿಯವರು ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿದ್ದು,ಧಾರ್ಮಿಕ,ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.