ಮಲ್ಪೆ-ವೀರಮಾರುತಿ ಫ್ರೆಂಡ್ಸ್ ತೆಂಕನಿಡಿಯೂರು ಇವರ ಆಶ್ರಯದಲ್ಲಿ ತೆಂಕನಿಡಿಯೂರು ಹೈಸ್ಕೂಲ್ ಮೈದಾನದಲ್ಲಿ ಮಲ್ಪೆ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟ ಹನುಮ ಟ್ರೋಫಿ-2023 ಜರುಗಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ
“ಸೋಲು ಗೆಲುವಿಗಿಂತ ಕ್ರೀಡಾಸ್ಪೂರ್ತಿ ಬಹುಮುಖ್ಯ.
ಯುವಕರು ಕ್ರೀಡಾಸ್ಪೂರ್ತಿಯಿಂದ ಆಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ.ಈ ಹಿಂದೆ ಮಲ್ಪೆ ಪರಿಸರದ ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು ಯುವಕರು ಆ ನಿಟ್ಟಿನಲ್ಲಿ ಪ್ರಯತ್ನಿಸಬೇಕಿದೆ.ಸ್ಥಳೀಯ ಪ್ರತಿಭೆಗಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ ವೀರಮಾರುತಿ ಫ್ರೆಂಡ್ಸ್ ಸಾಧನೆ ಶ್ಲಾಘನೀಯ” ಎಂದರು.