SportsKannada | ಸ್ಪೋರ್ಟ್ಸ್ ಕನ್ನಡ

ಒಂದೇ ಓವರಿನಲ್ಲಿ ಏಳು ಸಿಕ್ಸರ್‌ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ 2022 ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ನಲ್ಲಿ ಅಬ್ಬರಿಸುವುದರ ಜೋತೆಗೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಓವರ್‌ನಲ್ಲಿನ ಸತತ ಏಳು ಸಿಕ್ಸರ್ ಸಿಡಿಸಿದ್ದಲ್ಲದೆ ಅಜೇಯ ದ್ವಿಶತಕ ದಾಖಲಿಸಿ ಅಬ್ಬರಿಸಿದ್ದಾರೆ.
ಉತ್ತರ ಪ್ರದೇಶ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಹಾರಾಷ್ಟ್ರ ಪರ ನಾಯಕ ಮತ್ತು  ಓಪನರ್ ಋತುರಾಜ್ ಗಾಯಕ್ವಾಡ್ ಏಕಾಂಗಿಯಾಗಿ ಅಬ್ಬರಿಸಿ ಶ್ರೇಷ್ಠ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ಒಂದು ತುದಿಯಲ್ಲಿ ವಿಕೆಟ್ ಉರುಳುತ್ತಿದ್ದರೆ ಮತ್ತೊಂದು ತುದಿಯಲ್ಲಿ ಭದ್ರವಾಗಿ ನೆಲ ಕಚ್ಚಿದ ಮಹಾರಾಷ್ಟ್ರ ನಾಯಕ ಋತುರಾಜ್  159 ಎಸೆತಗಳಲ್ಲಿ ಅಜೇಯ 220 ರನ್‌ ಕಲೆಹಾಕುವ ಮೂಲಕ ಮಿಂಚಿದರು. 138.36 ಸರಾಸರಿಯಲ್ಲಿ ಬ್ಯಾಟ್‌ ಬೀಸಿದ ರುತುರಾಜ್‌ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು ಭರ್ಜರಿ 16 ಸಿಕ್ಸರ್‌ ಬಾರಿಸಿದ್ದರು
49ನೇ ಓವರ್‌ನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡಿದ ಋತುರಾಜ್ ಗಾಯಕ್ವಾಡ್ ಬರೋಬ್ಬರಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಶಿವ ಸಿಂಗ್‌ ಬೌಲಿಂಗ್‌ನಲ್ಲಿ ಒಂದರ ಹಿಂದೆ ಮತ್ತೊಂದರಂತೆ ಸಿಕ್ಸರ್ ಸಿಡಿಸಿದ ಗಾಯಕ್ವಾಡ್‌, ನೋ ಬಾಲ್‌ ಎಸೆತದಲ್ಲೂ ಚೆಂಡನ್ನು ಬೌಂಡರಿ ಗೆರೆ ದಾಟಿಸುವ ಮೂಲಕ ಓವರ್‌ನಲ್ಲಿ ಏಳು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಸಾಧನೆ ಮಾಡಿ ದಾಖಲೆ ಮಾಡಿದ್ದಾರೆ.
*ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ*
https://youtu.be/HS8IEKHg8o0
ಇನ್ನೂ ಒಂದು ಓವರ್‌ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ದಾಖಲೆಯು ವಿಜರ್ ಹಜಾರೆ ಟ್ರೋಫಿಯಲ್ಲಿ ದಾಖಲಾಗಿದೆ. 49ನೇ ಓವರ್‌ನಲ್ಲಿ 43 ರನ್‌ ದಾಖಲಾಗುವ ಮೂಲಕ ಅತ್ಯಂತ ದುಬಾರಿ ಓವರ್‌ ಎಂಬ ಪಟ್ಟಿಗೆ ಸೇರಿದೆ.
ಋತುರಾಜ್ ಗಾಯಕ್ವಾಡ್ ಅಜೇಯ 220 ರನ್‌ಗಳ ನೆರವಿನಿಂದ ಮಹಾರಾಷ್ಟ್ರ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 330 ರನ್ ಕಲೆಹಾಕಿದೆ. ಉತ್ತರ ಪ್ರದೇಶ ತಂಡಕ್ಕೆ 331ರನ್ ಗುರಿ ನೀಡಿದೆ.
Exit mobile version