ಕ್ರಿಕೆಟ್ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಉದ್ಯಾವರ ಸರಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ...

ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಉದ್ಯಾವರ ಸರಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

-

- Advertisment -spot_img

ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಉದ್ಯಾವರ ಸರಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಉಡುಪಿ-ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಪಿತ್ರೋಡಿ(ರಿ) ಇವರ ವತಿಯಿಂದ ಉದ್ಯಾವರ ವೆಸ್ಟ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ CA ಮಲ್ಲೇಶ್ ಕುಮಾರ್ ಸ್ಮರಣಾರ್ಥ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರಿಸಲಾಯಿತು.

ತದ ನಂತರ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಂದೀಪ್ ಕುಮಾರ್ “ವೆಂಕಟರಮಣ ಸಂಸ್ಥೆ ಕಳೆದ 37 ವರ್ಷಗಳಿಂದ ಕ್ರೀಡೆ,ಧಾರ್ಮಿಕ,ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿದೆ.ಮುಂದೆಯೂ ಕೂಡ ಸಮಾಜಕ್ಕೆ ಅಗತ್ಯ ಸೇವೆಗಳನ್ನು ಪೂರೈಸಲು ಸಿದ್ಧರಿದ್ದೇವೆ,ಶಾಲಾ ವಿದ್ಯಾರ್ಥಿಗಳು ಶುದ್ಧ ಕುಡಿಯುವ ನೀರಿನ ಘಟಕದ ಸದ್ವಿನಿಯೋಗ ಪಡಿಸಿಕೊಳ್ಳಬೇಕು,ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು” ಎಂದರು.

 

ಈ ಸಂದರ್ಭ GHS ಉದ್ಯಾವರ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪ್ರಭಾ,GJC ಉದ್ಯಾವರ ಪ್ರಭಾರ ಪ್ರಾಂಶುಪಾಲ ದಿನೇಶ್ ಕುಮಾರ್,ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ವೆಂಕಟರಮಣ ಸಂಸ್ಥೆ ಗೌರವ ಸಲಹೆಗಾರರಾದ ಜಿತೇಂದ್ರ ಶೆಟ್ಟಿ,
SDMC ಅಧ್ಯಕ್ಷರಾದ ಹರಿಶ್ಚಂದ್ರ, ಗೌರವಾಧ್ಯಕ್ಷ ಗೋಪಾಲ್ ಅಮೀನ್,ಸಂಸ್ಥೆಯ ಉಪಾಧ್ಯಕ್ಷ ವಿಜಯ್ ಕೋಟ್ಯಾ‌ನ್,ಗೌರವ ಸಲಹೆಗಾರರಾದ ಸತೀಶ್ ಕುಂದರ್,ಉಮೇಶ್ ಕರ್ಕೇರ,ಲೋಕೇಶ್,ಪ್ರಕಾಶ್ ಶೆಟ್ಟಿ,ಗಂಗಾಧರ ಕರ್ಕೇರ,ರತನ್ ಸುರಭಿ,ಸ್ಪೋರ್ಟ್ಸ್ ಕನ್ನಡ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ ಮತ್ತು ವೆಂಕಟರಮಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಸುಜಾತ ದಾನಿಗಳಿಗೆ ಸ್ಮರಣಿಕೆ ವಿತರಿಸಿದರೆ,ಸುಜಲಾ ಕಾರ್ಯಕ್ರಮ ನಿರೂಪಿಸಿದರು.

ಚಿತ್ರಕೃಪೆ-ರತನ್ ಸುರಭಿ.

LEAVE A REPLY

Please enter your comment!
Please enter your name here

17 − nine =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you