ಕ್ರಿಕೆಟ್ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರಾಹುಲ್! ಮಿಂಚಿದ ರಿಷಭ್ ಮತ್ತು ಜಡ್ಡು; ಇಂಗ್ಲೆಂಡ್‌ನಷ್ಟೇ...

ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರಾಹುಲ್! ಮಿಂಚಿದ ರಿಷಭ್ ಮತ್ತು ಜಡ್ಡು; ಇಂಗ್ಲೆಂಡ್‌ನಷ್ಟೇ ಸ್ಕೋರ್‌ ಮಾಡಿ ಭಾರತ ಆಲೌಟ್

-

- Advertisment -spot_img

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ರೋಮಾಂಚಕಾರಿಯಾದ ತಿರುವು ಪಡೆದುಕೊಂಡಿದೆ. ಆತಿಥೇಯ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 387 ರನ್ ಗಳಿಸಿದರೆ, ಭಾರತವು ಉತ್ತರವಾಗಿ ಮೂರನೇ ದಿನದಾಟದ ಅಂತ್ಯಕ್ಕೆ ಅದೇ ಮೊತ್ತ 387 ರನ್ ಗಳಿಸಿ ಆಲೌಟ್ ಆಯಿತು. ದಿನದಾಟದ ಕೊನೆಗೆ ಇಂಗ್ಲೆಂಡ್ ವಿಕೆಟ್ ಕಳೆದುಕೊಳ್ಳದೆ ಎರಡು ರನ್ ಗಳಿಸಿದೆ.

ಭಾರತದ ಪರವಾಗಿ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರು ವೀರೋಚಿತ ಶತಕ (100 ರನ್) ದಾಖಲಿಸಿ ತಂಡಕ್ಕೆ ಭದ್ರ ಆಧಾರ ನೀಡಿದರು. 177 ಎಸೆತಗಳಲ್ಲಿ 13 ಬೌಂಡರಿಗಳೊಂದಿಗೆ ರಾಹುಲ್ ಅವರ ಈ ಇನ್ನಿಂಗ್ಸ್ ಶ್ರೇಷ್ಠವಾದದ್ದು. ತಮ್ಮ ಈ ಶತಕದ ಮೂಲಕ ಅವರು ಲಾರ್ಡ್ಸ್‌ನಲ್ಲಿ ಸತತ ಎರಡನೇ ಬಾರಿ ಶತಕ ಬಾರಿಸುವ ಸಾಧನೆ ಮಾಡಿದ್ದಾರೆ.

ಗಾಯದ ಹೊರತಾಗಿಯೂ ಬ್ಯಾಟಿಂಗ್‌ಗೆ ಬಂದ ರಿಷಭ್ ಪಂತ್ (74) ಅವರ ದಿಟ್ಟ ಹೋರಾಟದ ಮನೋಭಾವವನ್ನು ಸಹ ಉಲ್ಲೇಖಿಸಬೇಕಾಗಿದೆ. ಅವರು 112 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಿತ ಅಗ್ರೇಸಿವ್ ಇನ್ನಿಂಗ್ಸ್ ಆಡಿದರು. ಜೊತೆಗೆ ಸಾಥ್ ನೀಡಿದ ರವೀಂದ್ರ ಜಡೇಜಾ (72) ಅವರು ಕೂಡಾ ಅಚ್ಚುಕಟ್ಟಾದ ಪ್ರದರ್ಶನ ನೀಡಿದ್ದು, 131 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಬಾರಿಸಿದರು.

ಇದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ರೆಡ್ಡಿ (30) ಮತ್ತು ವಾಷಿಂಗ್ಟನ್ ಸುಂದರ್ (23) ಉತ್ತಮ ಕೊಡುಗೆ ನೀಡಿದರು. ಇಂಗ್ಲೆಂಡ್ ಬೌಲರ್‌ಗಳು ತೀವ್ರ ಶ್ರಮ ಪಟ್ಟು ಭಾರತವನ್ನು ಆಲೌಟ್ ಮಾಡಿದರು.

ಮೊದಲ ಇನ್ನಿಂಗ್ಸ್ ನ ಆಟದ ನಂತರ ಪಂದ್ಯ ಸದ್ಯ ಅತೀ ಸಮಬಲದ ಸ್ಥಿತಿಯಲ್ಲಿದೆ. ಮುಂದಿನ ದಿನಗಳ ಆಟದಲ್ಲಿ ಎರಡೂ ತಂಡಗಳ ತಂತ್ರಗಳು ಪಂದ್ಯ ಫಲಿತಾಂಶ ನಿರ್ಧಾರಕ್ಕೆ ಪ್ರಮುಖವಾಗಲಿವೆ.

LEAVE A REPLY

Please enter your comment!
Please enter your name here

six + 13 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you