Site icon SportsKannada ಸ್ಪೋರ್ಟ್ಸ್ ಕನ್ನಡ

ದಶಕದ ನಂತರ ಬಾರ್ಡರ್-ಗವಾಸ್ಕರ್ ಸರಣಿ ಸೋತ ಭಾರತ, WTC ಫೈನಲ್’ನಿಂದಲೂ ಔಟ್!

ದಶಕದ ನಂತರ ಬಾರ್ಡರ್-ಗವಾಸ್ಕರ್ ಸರಣಿ ಸೋತ ಭಾರತ, WTC ಫೈನಲ್’ನಿಂದಲೂ ಔಟ್!

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ವಿಕೆಟ್’ಗಳ ಸೋಲು ಕಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್’ಷಿಪ್’ನಲ್ಲಿ ಫೈನಲ್ ತಲುಪುವ ಭಾರತದ ಕನಸು ನುಚ್ಚುನೂರಾಗಿದೆ. ಕಾಂಗರೂಗಳ ವಿರುದ್ಧ ಟೆಸ್ಟ್ ಸರಣಿ ಸೋಲುವುದರೊಂದಿಗೆ ಟೀಮ್ ಇಂಡಿಯಾ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಸೋಲು ಕಂಡಿದೆ. 2018-19ರಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದಿದ್ದರೆ, 2021ರಲ್ಲಿ ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. 10 ವರ್ಷಗಳಿಂದ ಕಾಂಗರೂಗಳನ್ನು ಬೇಟೆಯಾಡುತ್ತಾ ಬಂದಿದ್ದ ಭಾರತ, ಈ ಬಾರಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಸೋಲಿನ ಮುಖಭಂಗ ಎದುರಿಸಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್’ನಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲಲು 162 ರನ್’ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 4 ವಿಕೆಟ್ ಒಪ್ಪಿಸಿ ಜಯಭೇರಿ ಬಾರಿಸಿತು. ಸರಣಿ ಸೋಲಿನ ಮಧ್ಯೆಯೂ ಸರಣಿಯಲ್ಲಿ ಒಟ್ಟು 32 ವಿಕೆಟ್ ಉರುಳಿಸಿದ ಟೀಮ್ ಇಂಡಿಯಾದ ಪ್ರೀಮಿಯಂ ಫಾಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ಸರಣಿಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.

Exit mobile version