SportsKannada | ಸ್ಪೋರ್ಟ್ಸ್ ಕನ್ನಡ

ಆಸ್ಟ್ರೇಲಿಯ ವಿರುದ್ಧ ಟಿ20 ಸರಣಿ ಗೆಲ್ಲುವುದರ ಜೊತೆಗೆ ಪಾಕಿಸ್ತಾನವನ್ನು ಹಿಂದಿಕ್ಕಿ ವಿಶ್ವದಾಖಲೆ ಬರೆದ ಭಾರತ..!

ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ  ಟಿ20 ಪಂದ್ಯದಲ್ಲಿ ಅದ್ಭುತ ಆಟವನ್ನಾಡಿದ  ಭಾರತ ತಂಡ ಆಸ್ಟ್ರೇಲಿಯಾವನ್ನು  ಆರು ವಿಕೆಟ್‌ಗಳಿಂದ ಸೋಲಿಸಿತು.
ಇದರೊಂದಿಗೆ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಮೂರು ಟಿ20 ಪಂದ್ಯದಗಳ ಸರಣಿಯಲ್ಲಿ 2-1 ಅಂತರದಿಂದ ಗೆಲುವು ಸಾಧಿಸಿದ ಭಾರತ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡದ  ಪರ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಸಮಯೋಚಿತ ಆಟವಾಡಿ ಆಸಿಸ್ ತಂಡವನ್ನು ಮಣಿಸಿದ್ದಷ್ಟೇ ಅಲ್ಲದೆ ಪಾಕಿಸ್ತಾನ ತಂಡವನ್ನು ಹಿಂದಿಕ್ಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶೇಷವೆಂದರೆ ಈ ವಿಶ್ವದಾಖಲೆಯನ್ನು ಮಾಡಿರುವ ಮೊದಲ ದೇಶ ಭಾರತ ಎನ್ನುವುದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ  ಭಾರತ ತಂಡ ಉತ್ತಮ ಆಟ ಪ್ರದರ್ಶಿಸುತ್ತಿದೆ. ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವುದರೊಂದಿಗೆ ಭಾರತ ತಂಡ ಒಂದು ವರ್ಷದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವರ್ಷ 21ನೇ ಟಿ20ಯಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.
ಗಮನಾರ್ಹ ವಿಷಯವೆಂದರೆ ಈ ದಾಖಲೆಯನ್ನು ತನ್ನ ಹೆಸರಿಗೆ ಬರೆದು ಕೊಳ್ಳಲು  ಬ್ಲೂ ಬಾಯ್ಸ್ ಖ್ಯಾತಿಯ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಕ ಎದುರಾಳಿ ಪಾಕಿಸ್ತಾನ ತಂಡವನ್ನು  ಹಿಂದಿಕ್ಕಿದೆ.
ವಾಸ್ತವವಾಗಿ, 2021 ರಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಪಾಕಿಸ್ತಾನ ತಂಡ  T20  ಪಂದ್ಯಗಳಲ್ಲಿ 20  ಅಂತರಾಷ್ಟ್ರೀಯ T20 ಪಂದ್ಯಗಳನ್ನು ಗೆದ್ದಿತ್ತು. ಭಾರತಕ್ಕಿಂತ ಮೊದಲು, ವಿಶ್ವದ ಯಾವುದೇ ತಂಡವು ಕ್ಯಾಲೆಂಡರ್ ವರ್ಷದಲ್ಲಿ 20 ಕ್ಕಿಂತ ಹೆಚ್ಚು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರಲಿಲ್ಲ.
ಅತ್ಯುತ್ತಮ ಫಾರ್ಮ್‌ನಲ್ಲಿರುವ ಭಾರತ ತಂಡ  2022 ರಲ್ಲಿ ಇಲ್ಲಿಯವರೆಗೆ  29 ಟಿ20 ಪಂದ್ಯಗಳಲ್ಲಿ 21 ಪಂದ್ಯಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಈ ವರ್ಷ 10 ತಿಂಗಳು ಕೂಡ ಪೂರ್ಣಗೊಂಡಿಲ್ಲ. ಇನ್ನೂ ಕೆಲವು ಪಂದ್ಯಗಳನ್ನು ಗೆದ್ದು ದಾಖಲೆಯನ್ನು ಇನ್ನಷ್ಟು ಬಲ‌ ಗೊಳಿಸುವ ಅವಕಾಶ  ಟೀಂ ಇಂಡಿಯಾಕ್ಕಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ರನ್ ಕಲೆ ಹಾಕಿಯು 4 ವಿಕೆಟ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು,  ನಂತರ ಎರಡು ಪಂದ್ಯಗಳಲ್ಲಿ ಭಾರತ ತಂಡದ ಆಟಗಾರರ ಅಬ್ಬರದ ಆಟಕ್ಕೆ ಎರಡು ಪಂದ್ಯಗಳನ್ನು ಗೆದ್ದು ಆಸ್ಟ್ರೇಲಿಯಾ ವಿರುದ್ಧ  ಸರಣಿಯನ್ನು ವಶಪಡಿಸಿಕೊಂಡಿದೆ.
2022ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಫ್ರಿಕಾ ವಿರುದ್ಧವೂ ಸೆಪ್ಟೆಂಬರ್ 28 ರಿಂದ  ಟಿ20 ಸರಣಿ ಆಡಬೇಕಿದೆ.
ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸುವ ಮೂಲಕ ಭಾರತ ತಂಡ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಮೂರನೇ ಟಿ20 ಪಂದ್ಯದಲ್ಲಿ ಭಾರತ ಪರ ಸೂರ್ಯಕುಮಾರ್ ಯಾದವ್ ಮತ್ತು ವಿರಾಟ್ ಕೊಹ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದರು. ಇವರಿಬ್ಬರ ಬ್ಯಾಟಿಂಗ್ ಮುಂದೆ ಆಸ್ಟ್ರೇಲಿಯಾದ ಬೌಲರ್‌ಗಳು ನಿಲ್ಲಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಡೆತ್ ಓವರ್‌ಗಳಲ್ಲಿ 16 ಎಸೆತಗಳಲ್ಲಿ 25 ರನ್ ಗಳಿಸಿ ಬಿರುಸಿನ ಆಟವಾಡಿದರು. ಟೀಂ ಇಂಡಿಯಾ ಪಂದ್ಯವನ್ನು 4 ವಿಕೆಟ್‌ಗಳಿಂದ ಗೆದ್ದುಕೊಂಡಿತು.
ಅದೇನೇ ಇರಲಿ ಟಿಮ್ ಇಂಡಿಯಾ ಪರ ಕಳಪೆ ಫಾರ್ಮ್ ನಲ್ಲಿದ್ದ ರೋಹಿತ್ ಶರ್ಮಾ ಮತ್ತು ಕಿಂಗ್ ಕೊಯ್ಲಿ ತಮ್ಮ ಆಟದ ಲಯಕ್ಕೆ ಮರಳಿದ್ದು  ಬರಲಿರುವ ವಿಶ್ವಕಪ್ ದೃಷ್ಟಿಯಿಂದ ಒಳ್ಳೆಯದಾಗಿದೆ….
Exit mobile version