ಕ್ರಿಕೆಟ್ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

-

- Advertisment -spot_img

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ ತಂಡ ಅನಾವರಣ

*ಮಂಗಳೂರು, ಜೂನ್ 14* : ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ರ ಅಂಗವಾಗಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಫ್ರಾಂಚೈಸಿಯು ಭಾರತೀಯ ಕ್ರಿಕೆಟಿಗ ಕರೂಣ್ ನಾಯರ್ ಅವರನ್ನು ತಂಡದ ನಾಯಕರಾಗಿ ಘೋಷಿಸಿದೆ. ಭಾನುವಾರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಫ್ರಾಂಚೈಸಿಯು ತನ್ನ ಚೊಚ್ಚಲ ತಂಡವನ್ನು ಪರಿಚಯಿಸುವುದರ ಜೊತೆಗೆ ನಾಯಕತ್ವ ತಂಡವನ್ನು ಪ್ರಕಟಿಸಿ, ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಅಧಿಕೃತ ಗೀತೆಯನ್ನು ಬಿಡುಗಡೆ ಮಾಡಿತು ಹಾಗೂ ತಂಡದ ಅಧಿಕೃತ ಜೆರ್ಸಿಯನ್ನು ಅನಾವರಣಗೊಳಿಸಿತು.

ಕಾರ್ಯಕ್ರಮದಲ್ಲಿ ಕೆಎಸ್ಸಿಎ ಮಂಗಳೂರು ವಲಯದ ಅಧ್ಯಕ್ಷ ಡಾ. ಶ್ರೀಕಾಂತ್ ರೈ, ಕೆಎಸ್ಸಿಎ ಗೌರವ ಖಜಾಂಚಿ ಬಿ.ಎನ್. ಮಧುಕರ್, ಕೆಎಸ್ಸಿಎ ವ್ಯವಸ್ಥಾಪನಾ ಸಮಿತಿ ಸದಸ್ಯ ಅವಿನಾಶ್ ವೈದ್ಯ, ಮನ್ಯತಾ ಡೆವಲಪರ್ಸ್ ನಿರ್ದೇಶಕ ಹಾಗೂ ಕೋಸ್ಟಲ್ ಕಿಂಗ್ಸ್ ಮಂಗಳೂರು ಮಾಲೀಕ ವಿನೋದ್ ನಾಯ್ಡು, ಭಾರತೀಯ ಕ್ರಿಕೆಟಿಗರಾದ ಕರೂಣ್ ನಾಯರ್ ಮತ್ತು ಶ್ರೇಯಸ್ ಗೋಪಾಲ್, ಕನ್ನಡ ಹಾಗೂ ತುಳು ಚಿತ್ರನಟ ರೂಪೇಶ್ ಶೆಟ್ಟಿ, ಕೆಎಸ್ಸಿಎ ಪದಾಧಿಕಾರಿಗಳು, ತಂಡದ ಆಟಗಾರರು ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ಜೆರ್ಸಿಯನ್ನು ಬಿ.ಎನ್. ಮಧುಕರ್ ಅನಾವರಣಗೊಳಿಸಿದರೆ, ತಂಡದ ಅಧಿಕೃತ ಗೀತೆಯನ್ನು ಅವಿನಾಶ್ ವೈದ್ಯ ಬಿಡುಗಡೆ ಮಾಡಿದರು.

ತಂಡದ ನಾಯಕತ್ವ ವಹಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಕರೂಣ್ ನಾಯರ್, “ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಕರ್ನಾಟಕದ ಪ್ರತಿಭಾವಂತ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕನಾಗಿ ಆಯ್ಕೆಯಾಗಿರುವುದು ನನಗೆ ಹೆಮ್ಮೆಯ ಸಂಗತಿ. ನನ್ನ ಮೇಲೆ ವಿಶ್ವಾಸವಿಟ್ಟಿರುವ ವಿನೋದ್ ಸರ್ ಹಾಗೂ ಫ್ರಾಂಚೈಸಿಯ ಎಲ್ಲರಿಗೂ ಧನ್ಯವಾದಗಳು. ಉತ್ತಮ ಕ್ರಿಕೆಟ್ ಆಡುವುದು, ಪ್ರತಿಯೊಂದು ಪಂದ್ಯದಲ್ಲೂ ಶ್ರೇಷ್ಠ ಪ್ರದರ್ಶನ ನೀಡುವುದು ಹಾಗೂ ಟ್ರೋಫಿಯನ್ನು ಮಂಗಳೂರಿಗೆ ತರುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದರು.

ಭಾರತೀಯ ಕ್ರಿಕೆಟಿಗ ಶ್ರೇಯಸ್ ಗೋಪಾಲ್ ಮಾತನಾಡಿ, “ನನ್ನ ಪೀಳಿಗೆಯ ಬಹುತೇಕ ಆಟಗಾರರಂತೆ ನಾನು ಕೂಡ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಹಾಗೂ ಅನಿಲ್ ಕುಂಬ್ಳೆ ಅವರನ್ನು ನೋಡಿ ಬೆಳೆದಿದ್ದೇನೆ. ಅವರು ನನ್ನ ಕ್ರಿಕೆಟ್ ಬದುಕಿಗೆ ಪ್ರೇರಣೆಯಾಗಿದ್ದಾರೆ” ಎಂದರು.

ಅಲ್ಲದೆ, “ಕೋಸ್ಟಲ್ ಕಿಂಗ್ಸ್ ಮಂಗಳೂರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೈದಾನಕ್ಕೆ ಬಂದು ನಮ್ಮನ್ನು ಬೆಂಬಲಿಸಬೇಕು. ನಾವು ಉತ್ತಮ ಕ್ರಿಕೆಟ್ ಪ್ರದರ್ಶಿಸಿ ನಿಮಗೆ ಮನರಂಜನೆ ನೀಡುವ ಭರವಸೆ ನೀಡುತ್ತೇವೆ” ಎಂದು ಅಭಿಮಾನಿಗಳಿಗೆ ಕರೆ ನೀಡಿದರು.

ಫ್ರಾಂಚೈಸಿಯ ದೃಷ್ಟಿಕೋನದ ಕುರಿತು ಮಾತನಾಡಿದ ತಂಡದ ಮಾಲೀಕ ವಿನೋದ್ ನಾಯ್ಡು, “ನಾವು ಕೇವಲ ಮಂಗಳೂರನ್ನಷ್ಟೇ ಅಲ್ಲ, ಇಡೀ ಕರಾವಳಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದೇವೆ. ಅದಕ್ಕಾಗಿಯೇ ತಂಡಕ್ಕೆ ‘ಕೋಸ್ಟಲ್ ಕಿಂಗ್ಸ್ ಮಂಗಳೂರು’ ಎಂಬ ಹೆಸರನ್ನು ನೀಡಲಾಗಿದೆ. ಕೆಎಸ್ಸಿಎ ಮಾರ್ಗದರ್ಶನದಲ್ಲಿ ಈ ಭಾಗದಲ್ಲಿ ತಳಮಟ್ಟದ ಕ್ರಿಕೆಟ್ಗೆ ಉತ್ತೇಜನ ನೀಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಮಹಾರಾಜ ಟ್ರೋಫಿಗೆ ಮಾತ್ರ ಸೀಮಿತವಾಗದೆ, ಕರಾವಳಿ ಭಾಗದ ಯುವ ಕ್ರಿಕೆಟಿಗರೊಂದಿಗೆ ನಿರಂತರ ಸಂಪರ್ಕದಲ್ಲಿರುವ ತಂಡವಾಗಿ ಕೋಸ್ಟಲ್ ಕಿಂಗ್ಸ್ ಮಂಗಳೂರು ಬೆಳೆಯಲಿದೆ” ಎಂದು ಹೇಳಿದರು.

ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಟೂರ್ನಿಯ 5ನೇ ಆವೃತ್ತಿಯು ಜೂನ್ 20ರಿಂದ ಜುಲೈ 12ರವರೆಗೆ ಮೈಸೂರು, ಹುಬ್ಬಳ್ಳಿ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

four × 1 =

Latest news

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...
- Advertisement -spot_imgspot_img

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

Must read

- Advertisement -spot_imgspot_img

You might also likeRELATED
Recommended to you