Site icon SportsKannada ಸ್ಪೋರ್ಟ್ಸ್ ಕನ್ನಡ

ಟೀಮ್ ಇಂಡಿಯಾವನ್ನು ರಕ್ಷಿಸಿದ ಕನ್ನಡ ವೀರ!

ಟೀಮ್ ಇಂಡಿಯಾವನ್ನು ರಕ್ಷಿಸಿದ ಕನ್ನಡ ವೀರ!

 
ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್‌ ಇಂಗ್ಲೆಂಡ್‌ನಲ್ಲಿ ಸ್ಥಿರ ಪ್ರದರ್ಶನ ಮುಂದುವರೆಸಿದ್ದಾರೆ. ಮೊದಲಿಗೆ ರನ್‌ ಕಲೆ ಹಾಕುವಲ್ಲಿ ಪರದಾಡಿದ್ದ ರಾಹುಲ್‌ ಎರಡನೇ ದಿನ ಶತಕ ಬಾರಿಸಿದ್ದಾರೆ. ಈ ಮೂಲಕ ತಮ್ಮಲ್ಲಿರುವ ಬ್ಯಾಟಿಂಗ್ ಕ್ಷಮತೆಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮೂರನೇ ಟೆಸ್ಟ್ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯುತ್ತಿದೆ. ಮಹತ್ವದ ಟೆಸ್ಟ್‌ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ತಮ್ಮ ನೈಜ್ಯ ಆಟವನ್ನು ಆಡಿದ ಕೆಎಲ್‌, ತಂಡಕ್ಕೆ ಆಧಾರವಾದರು. ಸರಣಿಯುದ್ದಕ್ಕೂ ಕ್ಲಾಸಿಕ್ ಬ್ಯಾಟಿಂಗ್ ನಡೆಸಿರುವ ಕೆಎಲ್‌ ಲಾರ್ಡ್ಸ್‌ ಅಂಗಳದಲ್ಲಿ ಎರಡನೇ ಟೆಸ್ಟ್‌ ಶತಕ ಬಾರಿಸಿ ಅಬ್ಬರಿಸಿದರು. ಈ ಶತಕದ ಮೂಲಕ ರಾಹುಲ್‌ ಈ ಸರಣಿಯಲ್ಲಿ ಎರಡನೇ ಶತಕ ಬಾರಿಸಿದರು.
 
ಇಂಗ್ಲೆಂಡ್ ನೆಲದಲ್ಲಿ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ
ಶನಿವಾರ ಭಾರತ ಮೊದಲ ಇನಿಂಗ್ಸ್‌ ಆರಂಭಿಸಿದ್ದಾಗ ಕೆಎಲ್ ರಾಹುಲ್‌ ಅಜೇಯ 53 ರನ್‌ ಸಿಡಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಮೂರನೇ ದಿನದಾಟದ ಆರಂಭದಲ್ಲಿ ಕೆಎಲ್‌ ತನ್ನ ನೈಜ್ಯ ಅಂದಾಜಿನಲ್ಲಿ ಪ್ರದರ್ಶನ ನೀಡಿದರು. ಇವರು ಕೆಟ್ಟ ಎಸೆತಗಳನ್ನು ದಂಡಿಸುತ್ತಾ ಸಾಗಿದರು. ಈ ಮೂಲಕ ಲಾರ್ಡ್ಸ್‌ ಅಂಗಳದಲ್ಲಿ ದಾಖಲೆ ಬರೆದರು. ಈ ಮೈದಾನದಲ್ಲಿ ಒಂದಕ್ಕಿಂತ ಹೆಚ್ಚು ಶತಕ ಬಾರಿಸಿದ ಪಟ್ಟಿಗೆ ಸ್ಥಾನ ಪಡೆದರು.
ಇದು ಕೆಎಲ್ ರಾಹುಲ್‌ ಇಂಗ್ಲೆಂಡ್‌ ವಿರುದ್ಧ ಬಾರಿಸಿದ ಐದನೇ ಶತಕವಾಗಿದೆ. ಅಲ್ಲದೆ ಇಂಗ್ಲೆಂಡ್‌ ನೆಲದಲ್ಲಿ 4ನೇ ಶತಕ ಬಾರಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 10ನೇ ಶತಕ ಬಾರಿಸಿ ಅಬ್ಬರಿಸಿದರು. ಕೆಎಲ್‌ ರಾಹುಲ್‌ 176 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ ಮೂರಂಕಿ ಮುಟ್ಟಿ ಸಂಭ್ರಮಿಸಿದರು. ಆರಂಭಿಕರಾಗಿ ಕಣಕ್ಕೆ ಇಳಿಯುವ ಜವಾಬ್ದಾರಿ ಕೆಎಲ್ ರಾಹುಲ್‌ ಅವರ ಮೇಲೆ ಬಿದ್ದಿತು. ರಾಹುಲ್ ತಮ್ಮ ಅನುಭವ ಬಳಸಿಕೊಂಡು ಟೂರ್ನಿಯಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಮೂಲಕ ಕಷ್ಟದ ಸನ್ನಿವೇಶದಲ್ಲಿ ನೆಲಕಚ್ಚಿ ಬ್ಯಾಟ್ ಮಾಡಿ ನೆರವಾಗಿದ್ದಾರೆ.
Exit mobile version