ಸೆಪ್ಟೆಂಬರ್ 19ರಂದು ಚೆನ್ನನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ದುಲೀಪ್ ಟ್ರೋಫಿ ಪಂದ್ಯದಲ್ಲಿ ಭಾರತ ಎ ತಂಡದ ಪರ ರಾಹುಲ್ ಉತ್ತಮ ಪ್ರದರ್ಶನ ತೋರಿದ್ದರು. ಭಾರತ ಬಿ ವಿರುದ್ಧ ಪ್ರಥಮ ಇನ್ನಿಂಗ್ಸ್’ನಲ್ಲಿ 37 ರನ್ ಗಳಿಸಿದ್ದ ರಾಹುಲ್, 2ನೇ ಇನ್ನಿಂಗ್ಸ್’ನಲ್ಲಿ 57 ರನ್ ಗಳಿಸಿದ್ದರು
ದೆಹಲಿಯ ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ರಿಷಭ್ ಪಂತ್ ಭಾರತ ಟೆಸ್ಟ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದು, 2ನೇ ವಿಕೆಟ್ ಕೀಪರ್ ಆಗಿ ಧ್ರುವ ಜುರೆಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ಮಧ್ಯಮ ವೇಗದ ಬೌಲರ್, ಉತ್ತರ ಪ್ರದೇಶದ ಯಶ್ ದಯಾಳ್ ಇದೇ ಮೊದಲ ಬಾರಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆೆ.
ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು, 2ನೈ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಆರಂಭವಾಗಲಿದೆ. ಟೆಸ್ಟ್ ಸರಣಿಯ ನಂತರ ಆತಿಥೇಯ ಭಾರತ ಮತ್ತು ಬಾಂಗ್ಲಾದೇಶ ತಂಡಗಳು 3 ಪಂದ್ಯಗಳ ಟಿ20 ಸರಣಿಯನ್ನಾಡಲಿವೆ.
ಬಾಂಗ್ಲಾದೇಶ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಧ್ರುವ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಆಕಾಶ್ ದೀಪ್.