Categories
ತಾಲೂಕ ಸ್ಪೋರ್ಟ್ಸ್

ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ, ಪ.ಪೂ.ಕಾಲೇಜು ವಾರ್ಷಿಕ ಕ್ರೀಡೋತ್ಸವ

ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಇಲ್ಲಿನ 2019-20ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯ ಕರುಣಾಕರ ಶೆಟ್ಟಿ ಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಭಯ ಸಂಸ್ಥೆಗಳ ವತಿಯಿಂದ ಕರುಣಾಕರ ಶೆಟ್ಟಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಕೆ ರಮೇಶ್ ಗಾಣಿಗ, ಜಯಂತಿ ವಿಜಯ ಕೃಷ್ಣ ಮತ್ತು ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ ಬಿಢೆ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ , ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೀವ ಶೆಟ್ಟಿ, ಕೊಲ್ಲೂರು ಠಾಣೆಯ ಎ.ಎಸ್.ಐ. ವಿಜಯ ಅಮೀನ್ ,ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಕೆ. ವಿ ಷಾಜಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು, ಮುಖ್ಯೋಪಾಧ್ಯಾಯ ನಾಗರಾಜ ಭಟ್ ವಂದಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

1 + 6 =