ಕೊಂಕಣ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ (ರಿ) ಆರಂಭದಿಂದಲೂ ಕ್ರಿಕೆಟ್‌ಗೆ ಕೊಡುಗೆ ನೀಡುತ್ತಿದೆ. ಸ್ವತಃ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಿದ್ದ ಇವರು ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುತ್ತಾ ಬಂದಿದ್ದಾರೆ.
ಇದೀಗ ಈ ಅಸೋಸಿಯೇಷನ್ ಜಿ ಎಸ್ ಬಿ ಸಮಾಜ ಭಾಂಧವರಿಗಾಗಿ ಕೋಟೇಶ್ವರದಲ್ಲಿ ಹರಾಜು ಆಧಾರಿತ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದೆ. ಮೇ 11 ಮತ್ತು 12 ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿದೆ. GSBಯ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವೇ ಸಿಗಲಿದೆ.
ಜನಪರ ಕೆಲಸಗಳ ಜೊತೆಗೆ ಕ್ರೀಡಾ ಲೋಕಕ್ಕೂ ಉತ್ತೇಜನ ಕೊಡುವ ನಿಟ್ಟಿನಲ್ಲಿ ಈ ಪಂದ್ಯಾವಳಿ ಆಯೋಜನೆಗೊಂಡಿದೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
ವಿಘ್ನೇಶ್ ಭಟ್- 9148854219
ವಿನೀತ್ ಭಟ್-8971950312